ಲಕ್ನೋ: ಹಿಂದಿ ಭಾಷೆ ಬಾರದವರು ಹಾಗೂ ಹಿಂದಿ ಭಾಷೆ ಬಗ್ಗೆ ಪ್ರೀತಿ ಇಲ್ಲದವರು ದೇಶ ಬಿಟ್ಟು ಹೋಗಬಹುದು ಎಂದು ಉತ್ತರಪ್ರದೇಶದ ಮೀನುಗಾರಿಕೆ ಸಚಿವ ಸಂಜಯ್ ನಿಶಾದ್ ವಿವಾದಕ್ಕೆ ಸಿಲುಕಿದ್ದಾರೆ.
ಬಾಲಿವುಡ್ ನಟ ಅಜಯ್ ದೇವಗನ್ ಮತ್ತು ಕನ್ನಡ ನಟ ಕಿಚ್ಚ ಸುದೀಪ್ ಅವರ ಟ್ವೀಟ್ ವಾರ್ ಈಗ ಎಲ್ಲಕಡೆ ದೊಡ್ಡ ಸುದ್ದಿಯಾಗಿದೆ. ಈ ವಾರ್ ಸಿನಿರಂಗದಲ್ಲಿ ಮಾತ್ರವಲ್ಲ ರಾಜಕೀಯಕ್ಕೂ ಪ್ರವೇಶ ಮಾಡಿದ್ದು ಭಾಷಾ ಚರ್ಚೆ ನಡೆಯುತ್ತಿದೆ. ಪರಿಣಾಮ ಈ ಕುರಿತು ನಿಶಾದ್ ಅವರನ್ನು ಮಾಧ್ಯಮಗಳು ಪ್ರಶ್ನಿಸಿದಾಗ ಅವರು, ಭಾರತದಲ್ಲಿ ವಾಸಿಸಲು ಬಯಸುವವರು ಹಿಂದಿಯನ್ನು ಪ್ರೀತಿಸಬೇಕಾಗುತ್ತದೆ. ನೀವು ಹಿಂದಿಯನ್ನು ಪ್ರೀತಿಸದಿದ್ದರೆ, ನೀವು ವಿದೇಶಿ ಅಥವಾ ವಿದೇಶಿ ಶಕ್ತಿಗಳೊಂದಿಗೆ ಸಂಬಂಧ ಹೊಂದಿದ್ದೀರಿ ಎಂದು ಭಾವಿಸಲಾಗುತ್ತದೆ ಎಂದು ಕಿಡಿಕಾರಿದರು.
PublicNext
30/04/2022 04:30 pm