ಬೆಂಗಳೂರು : ಕೇಂದ್ರ ಸಚಿವ ಅಮಿತ್ ಶಾ ಇಂದು ಬೆಂಗಳೂರಿಗೆ ಆಗಮಿಸಲಿದ್ದಾರೆ. ರೇಸ್ ಕೋರ್ಸ್ ರಸ್ತೆಯ ಖಾಸಗಿ ಹೋಟೆಲ್ ನಲ್ಲಿ ಶಾ ವಾಸ್ತವ್ಯ ಹೂಡಲಿದ್ದು, ನಾಳೆ ಖಾಸಗಿ ಹೋಟೆಲ್ ನಲ್ಲೇ ಸಭೆ ನಡೆಸಲಿದ್ದಾರೆ.
ಇನ್ನು ಮಹತ್ವದ ಬೆಳವಣಿಗೆ ಎಂದರೆ ರಾಜ್ಯ ಬಿಜೆಪಿ ಕಚೇರಿಯಲ್ಲಿ ನಡೆಯಬೇಕಿದ್ದ ಸಭೆ ಹೋಟೆಲ್ ಗೆ ಶಿಫ್ಟ್ ಆಗಿದೆ. ನಾಳೆ ಮಧ್ಯಾಹ್ನ ಸಿಎಂ ಅಧಿಕೃತ ನಿವಾಸದಲ್ಲಿ ಭೋಜನ ನಂತರ ರಾಜ್ಯ ಬಿಜೆಪಿ ಕೋರ್ ಕಮಿಟಿ ಸದಸ್ಯರ ಜೊತೆ ಅಮಿತ್ ಶಾ ಸಭೆ ನಡೆಸಲಿದ್ದಾರೆ. ಸಭೆಯಲ್ಲಿ ಮುಂದಿನ ವಿಧಾನಸಭಾ ಚುನಾವಣೆಗೆ ಸಿದ್ಧತೆಯ ಭಾಗವಾಗಿ ಚರ್ಚಿಸಲಿದ್ದಾರೆ.
ಇದೇ ಸಭೆಯಲ್ಲಿ ಪಾಲ್ಗೊಳ್ಳಲು ಇಂದು ಸಂಜೆ ಕರ್ನಾಟಕ ರಾಜ್ಯ ಬಿಜೆಪಿ ಘಟಕದ ಉಸ್ತುವಾರಿ ಅರುಣ್ ಸಿಂಗ್ ಬೆಂಗಳೂರಿಗೆ ಆಗಮಿಸಲಿದ್ದಾರೆ. ಹಾಗೂ ರೇಸ್ಕೋರ್ಸ್ ರಸ್ತೆ ಹೋಟೆಲ್ ನಲ್ಲಿ ನಡೆಯುವ ಸಭೆಯಲ್ಲಿ ಭಾಗಿಯಾಗಲಿದ್ದಾರೆ.
ಇಂದು ಸಂಜೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಕೇಂದ್ರ ಸಚಿವ ಅಮಿತ್ ಶಾರನ್ನ ಭೇಟಿಯಾಗಲಿದ್ದಾರೆ. ರಾಜ್ಯ ರಾಜಕೀಯದ ಸ್ಥಿತಿ ತಿಳಿಯಲು ಅಮಿತ್ ಶಾ ಬರುತ್ತಿದ್ದಾರೆ. ಚುನಾವಣಾ ವರ್ಷ ಹಿನ್ನೆಲೆಯಲ್ಲಿ ರಾಜ್ಯದ ಬಗ್ಗೆ ನರೇಂದ್ರ ಮೋದಿ, ಅಮಿತ್ ಶಾ ಹೆಚ್ಚು ಗಮನ ನೀಡಲಿದ್ದಾರೆ. ಮುಂದಿನ ಎಲೆಕ್ಷನ್ ನಲ್ಲಿ 150 ಸ್ಥಾನ ಗೆಲ್ಲಲು ಗುರಿ ಇಟ್ಟಿದ್ದೇವೆ. ರಾಜ್ಯ ನಾಯಕರ ಜೊತೆ ಶಾ ಸಮಾಲೋಚನೆ ನಡೆಸಲಿದ್ದಾರೆ ಎಂದು ತಿಳಿಸಿದ್ದಾರೆ.
PublicNext
02/05/2022 03:55 pm