ನವದೆಹಲಿ: ನನ್ನ ಬಂಧನಕ್ಕಾಗಿ ಪ್ರಧಾನಿ ಕಚೇರಿಯಿಂದಲೇ ಷಡ್ಯಂತ್ರ ರೂಪಿಸಲಾಗಿತ್ತು ಎಂಧೂ ಜಾಮೀನಿನ ಮೇಲೆ ಬಿಡುಗಡೆ ಆಗಿರುವ ಶಾಸಕ ಜಿಗ್ನೇಶ್ ಮೇವಾನಿ ಗಂಭೀರ ಆರೋಪ ಮಾಡಿದ್ದಾರೆ.
ಅಸ್ಸಾಂನಲ್ಲಿ ದಾಖಲಾಗಿರುವ ಎರಡು ಪ್ರಕರಣಗಳಲ್ಲಿ ಜಾಮೀನು ಪಡೆದು ಬಿಡುಗಡೆಯಾದ ನಂತರ ದೆಹಲಿಯ ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಗ್ನೇಶ್ ಮೇವಾನಿ, ನನ್ನ ಬಂಧನಕ್ಕೆ ಪ್ರಧಾನಿ ಕಚೇರಿಯಿಂದಲೇ ಷಡ್ಯಂತ್ರ ರೂಪಿಸಲಾಗಿದೆ. ಇದು ನನ್ನನ್ನು ನಾಶಮಾಡಲು ಪೂರ್ವ ಯೋಜಿತ ಸಂಚು. ಅವರು ನನ್ನನ್ನು ಕರೆದೊಯ್ದಾಗ ಪ್ರಕರಣದ ವಿವರಗಳನ್ನು ನೀಡಲಿಲ್ಲ. ನಾನು ವಕೀಲ ಮತ್ತು ಶಾಸಕ. ಅವರು ನನ್ನ ವಿರುದ್ಧ ಬಳಸಲಾದ ಸೆಕ್ಷನ್‌ಗಳನ್ನು ಅವರು ನನಗೆ ಹೇಳಲಿಲ್ಲ ಮತ್ತು ನನ್ನ ಹೆತ್ತವರೊಂದಿಗೆ ಮಾತನಾಡಲು ಬಿಡಲಿಲ್ಲ. ನನ್ನ ವಕೀಲರೊಂದಿಗೆ ಮಾತನಾಡಲೂ ಸಹ ನನಗೆ ಅವಕಾಶ ನೀಡಲಿಲ್ಲ ಎಂದು ಜಿಗ್ನೇಶ್ ಮೇವಾನಿ ಆರೋಪಿಸಿದ್ದಾರೆ.
PublicNext
02/05/2022 10:53 pm