ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಬೆಂಗಳೂರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮನ

ಬೆಂಗಳೂರು: ನಗರದ ಕಂಠೀರವ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಖೇಲೊ ಇಂಡಿಯಾ -2021 ಯುನಿವರ್ಸಿಟಿ ಗೇಮ್ಸ್ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲು ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್ ಶಾ ಅವರು ಸೋಮವಾರ ರಾತ್ರಿ 11.50 ಕ್ಕೆ ವಿಶೇಷ ವಿಮಾನದ ಮೂಲಕ ನಗರದ ಹೆಚ್.ಎ.ಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶಾ ಅವರನ್ನು ಹೂ ಗುಚ್ಛ ನೀಡಿ ಶಾಲುಹೊದೆಸಿ ಬರಮಾಡಿಕೊಂಡರು.

ಕೇಂದ್ರ ಸಚಿವರಾದ ಪ್ರಹ್ಲಾದ ಜೋಶಿ, ರಾಜ್ಯ ಸಚಿವರುಗಳಾದ ಆರಗ ಜ್ಞಾನೇಂದ್ರ, ಗೋವಿಂದ ಕಾರಜೋಳ, ನಾರಾಯಣ ಗೌಡ, ಲೋಕಸಭಾ ಸದಸ್ಯರಾದ ತೇಜಸ್ವಿ ಸೂರ್ಯ, ಸೇರಿದಂತೆ ಹಲವರು ಉಪಸ್ಥಿತರಿದ್ದರು.

Edited By :
PublicNext

PublicNext

03/05/2022 07:49 am

Cinque Terre

54.57 K

Cinque Terre

3

ಸಂಬಂಧಿತ ಸುದ್ದಿ