ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕರ್ನಾಟಕಕ್ಕೆ ಶಾ ಆಗಮನ 5 ಪ್ರಶ್ನೆ ಕೇಳಿದ ಕಾಂಗ್ರೆಸ್

ಕರ್ನಾಟಕ ವಿಧಾನಸಭಾ ಚುನಾವಣೆಗೆ ಇನ್ನು ಒಂದು ವರ್ಷ ಬಾಕಿಯಿದ್ದು, ಮೂರು ಪಕ್ಷಗಳು ತಮ್ಮದೇ ತಯಾರಿಯಲ್ಲಿ ತೊಡಗಿವೆ.

ಇದರ ಮಧ್ಯೆ ಇಂದು ರಾಜ್ಯಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸಿದ್ದಾರೆ. ಅಮಿತ್ ಶಾ ಉಪಸ್ಥಿತಿಯಲ್ಲಿ ನಡೆಯಲಿರುವ ಕೋರ್ ಕಮಿಟಿ ಸಭೆಯಲ್ಲಿ ಸಾರ್ವತ್ರಿಕ ಚುನಾವಣೆಯ ಸಿದ್ಧತೆಗಳ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆ ಇದೆ. ಅದರ ಜೊತೆಗೆ ರಾಜ್ಯ ಸರ್ಕಾರದ ಕಾರ್ಯವೈಖರಿ ಮತ್ತು ಪಕ್ಷ ಸಂಘಟನೆಯ ಅವಲೋಕನ ಮತ್ತು ಸಚಿವರ ಕಾರ್ಯವೈಖರಿ ಪ್ರಸ್ತಾಪ ಆಗುವ ಸಾಧ್ಯತೆಯೂ ಇದೆ.

ಇನ್ನು ಶಾ ರಾಜ್ಯಕ್ಕೆ ಆಗಮಿಸಿರುವ ಬೆನ್ನಲ್ಲೇ ಕಾಂಗ್ರೆಸ್ ಪ್ರಶ್ನೆಗಳ ಸುರಿಮಳೆ ಗೈದಿದೆ.

@AmitShah

ಅವರೇ, ನಿಮ್ಮ ಕರ್ನಾಟಕದ ಭೇಟಿಯ ಅಜೆಂಡಾ ಏನು?

PSI ಪರೀಕ್ಷೆ ಅಕ್ರಮವನ್ನು ಕೇಂದ್ರ ತನಿಖಾ ಸಂಸ್ಥೆಗೆ ವಹಿಸುವುದೇ?

ಬಿಟ್ ಕಾಯಿನ್ ಹಗರಣದ ತನಿಖೆಯನ್ನ ಚುರುಕುಗೊಳಿಸುವುದಕ್ಕಾ?

ಕುಸಿದು ಕುಳಿತಿರುವ ರಾಜ್ಯದ ಕಾನೂನು ಸುವ್ಯವಸ್ಥೆಯನ್ನ ಸರಿಪಡಿಸುವುದಕ್ಕಾ?

ಅಸಮರ್ಥ ಗೃಹಮಂತ್ರಿಯನ್ನು ಬದಲಿಸುವುದಕ್ಕಾ? ಅಥವಾ ಸಿಎಂ ಬದಲಾವಣೆಗಾ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

Edited By : Nirmala Aralikatti
PublicNext

PublicNext

03/05/2022 05:11 pm

Cinque Terre

33.68 K

Cinque Terre

13

ಸಂಬಂಧಿತ ಸುದ್ದಿ