ಬೆಂಗಳೂರು: ರಾಜ್ಯಕ್ಕೆ ಕೇಂದ್ರ ಗೃಹ ಸಚಿವ ಆಗಮನದ ಬೆನ್ನಲ್ಲೇ, ಸಚಿವ ಸಂಪುಟ ವಿಸ್ತರಣೆ ಕಸರತ್ತು ಕೂಡ ನಡೆಯುತ್ತಿದೆ. ಯಾವಾಗ ಸಚಿವ ಸಂಪುಟ ವಿಸ್ತರಣೆ ಆಗಲಿದೆ ಎನ್ನುವ ಮಾಹಿತಿಯನ್ನು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಬಿಚ್ಚಿಟ್ಟಿದ್ದು, 2-3 ದಿನಗಳಲ್ಲಿ ಎಂದು ತಿಳಿಸಿದ್ದಾರೆ.
ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನಾ ಇನ್ನೂ ಕೇಂದ್ರ ಸಚಿವ ಅಮಿತ್ ಶಾ ಅವರನ್ನು ಭೇಟಿ ಆಗಿಲ್ಲ. ಅವರನ್ನು ಆದಷ್ಟು ಬೇಗ ಭೇಟಿಯಾಗಿ, ಸಂಪುಟ ವಿಸ್ತರಣೆ ಕುರಿತಂತೆ ಚರ್ಚಿಸಲಿದ್ದೇನೆ. ಸಂಪುಟ ವಿಸ್ತರಣೆ 2-3 ದಿನಗಳಲ್ಲಿ ಆಗೋದು ನಿಶ್ಚಿತ ಎಂಬ ವಿಶ್ವಾಸವನ್ನು ವ್ಯಕ್ತ ಪಡಿಸಿದರು.
ಕೇಂದ್ರ ಸಚಿವ ಅಮಿತ್ ಶಾ ಅವರು, ಸಂಪುಟ ವಿಸ್ತರಣೆ ಬಗ್ಗೆ ಅಂತಿಮ ತೀರ್ಮಾನ ತೆಗೆದುಕೊಂಡೇ ರಾಜ್ಯಕ್ಕೆ ಬಂದಿದ್ದಾರೆ ಎಂದು ಅಂದುಕೊಂಡಿದ್ದೇನೆ. ಆದಷ್ಟು ಬೇಗ ಸಂಪುಟ ವಿಸ್ತರಣೆ ಆಗಲಿದೆ ಎಂದರು.
PublicNext
03/05/2022 05:34 pm