ವಿಜಯಪುರ: ಮೇ 10ರ ಒಳಗಡೆ ಸಿಎಂ ಬಸವರಾಜ ಬೊಮ್ಮಾಯಿಯವರ ಬದಲಾವಣೆ ಆಗಬಹುದು, ಈ ಸಂಬಂಧ ಪ್ರಧಾನಿ ಮೋದಿಯವರು ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತಾರೆ. ಸದ್ಯ ಪ್ರಧಾನಿ ವಿದೇಶ ಪ್ರವಾಸದಲ್ಲಿದ್ದಾರೆ ಅವರು ವಾಪಾಸ್ಸಾದ ಬಳಿಕ ಸಿಎಂ ಬದಲಾವಣೆ ಫೀಕ್ಸ್ ಎಂದು ಶಾಸಕ ಯತ್ನಾಳ್ ಹೇಳಿದ್ದಾರೆ.
ವಿಜಯಪುರಲ್ಲಿಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಅಥವಾ ಸಚಿವ ಸಂಪುಟ ಪುನರ್ ರಚನೆ ತೀರ್ಮಾನವು ಪ್ರಧಾನಿ ನರೇಂದ್ರ ಮೋದಿ ಅವರು ವಿದೇಶ ಪ್ರವಾಸದಿಂದ ವಾಪಸ್ಸಾದ ಬಳಿಕ ಆಗಲಿದೆ ಎಂದು ಹೇಳಿದರು.
ಒಟ್ಟಿನಲ್ಲಿ ಮೇ 10ರೊಳಗೆ ರಾಜ್ಯದ ವಿದ್ಯಾಮಾನಗಳ ಬಗ್ಗೆ ಸ್ಪಷ್ಟ ಚಿತ್ರಣ ಲಭಿಸಲಿದೆ ಎಂದಿದ್ದಾರೆ.
ರಾಜ್ಯದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವನ್ನು ಮರಳಿ ಅಧಿಕಾರಕ್ಕೆ ತರಲು ಏನೆಲ್ಲ ಬದಲಾವಣೆ ಮಾಡಬೇಕು ಎಂಬುದರ ಕುರಿತು ಈಗಾಗಲೇ ಎಲ್ಲ ಮಾಹಿತಿ ಸಂಗ್ರಹಿಸಲಾಗಿದೆ. ದೆಹಲಿಯಲ್ಲಿ ಒಂದು ಉನ್ನತ ಮಟ್ಟದ ಸಭೆ ಆಗಿದೆ. ಈ ಸಂಬಂಧ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಕರ್ನಾಟಕಕ್ಕೆ ಬಂದಿದ್ದಾರೆ. ಶೀಘ್ರದಲ್ಲೇ ಒಳ್ಳೆಯ ನಿರ್ಣಯ ಮಾಡಲಿದ್ದಾರೆ ಎಂದರು.
PublicNext
03/05/2022 09:48 pm