ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಂಪುಟ ವಿಸ್ತರಣೆ ನಿರ್ಧಾರ ಹಿರಿಯ ನಾಯಕರಿಗೆ ಬಿಟ್ಟಿದ್ದು: ಶ್ರೀರಾಮುಲು

ಗದಗ : ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತಂತೆ ಸಾರಿಗೆ ಶ್ರೀರಾಮುಲು ಪ್ರತಿಕ್ರಿಯೆ ನೀಡಿದ್ದು, ಸಚಿವ ಸಂಪುಟ ವಿಸ್ತರಣೆ ಕುರಿತಂತೆ ಬಿಜೆಪಿ ವರಿಷ್ಠರು ನಿರ್ಧರಿಸಲಿದ್ದಾರೆ ಎಂದು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ವರಿಷ್ಠರು, ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರು ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತಂತೆ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.

ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಕುರಿತು ಶಾಸಕ ಯತ್ನಾಳ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ರಾಮುಲು, ಸಿಎಂ ಬಸವರಾಜ ಬೊಮ್ಮಾಯಿ ಒಳ್ಳೆಯ ಆಡಳಿತ ನೀಡುತ್ತಿದ್ದಾರೆ. ಜನಪರ ಕೆಲಸ ಮಾಡುತ್ತಿದ್ದಾರೆ. 2023ರಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಚುನಾವಣೆಗೆ ಹೋಗುತ್ತೇವೆ ಎಂದು ಹೇಳಿದ್ದಾರೆ.

Edited By : Nagaraj Tulugeri
PublicNext

PublicNext

04/05/2022 01:54 pm

Cinque Terre

51.39 K

Cinque Terre

2

ಸಂಬಂಧಿತ ಸುದ್ದಿ