ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಭಾರಿ ಅಕ್ರಮ ನಡೆಯುತ್ತಿದೆ: ಡಿಕೆಶಿ ಆರೋಪ

ರಾಮನಗರ: ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಭಾರೀ ಅಕ್ರಮ ನಡೆಯುತ್ತಿದೆ. ಹಣ ಪಡೆದು ವಿಶ್ವವಿದ್ಯಾಲಯಗಳಲ್ಲಿ ನೇಮಕಾತಿ ಮಾಡಲಾಗುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಗಂಭೀರ ಆರೋಪ ಮಾಡಿದ್ದಾರೆ. ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ದೊಡ್ಡಆಲಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 545 ಪಿಎಸ್ಐ ನೇಮಕಾತಿ ಪರೀಕ್ಷೆಯ ಅಕ್ರಮ ಪ್ರಕರಣದಲ್ಲಿ ಕಿಂಗ್ ಪಿನ್ ಸಚಿವ ಡಾ.ಅಶ್ವತ್ಥ್ ನಾರಾಯಣ ಎಂದು ನೇರ ಆರೋಪ ಮಾಡಿದ್ದಾರೆ.

ಸಚಿವ ಅಶ್ವತ್ಥ್ ನಾರಾಯಣ ದೊಡ್ಡ ಮನುಷ್ಯ, ಅಶ್ವತ್ಥ್ ನಾರಾಯಣನಿಗೆ ಮಂಪರು ಪರೀಕ್ಷೆ ನಡೆಸಬೇಕಾಗಿದೆ. ನಾರಾಯಣ ಏನೇನು ಬಿಚ್ಚುತ್ತಾನೋ ಬಿಚ್ಚಲಿ, ಕೆಲವರು ಬಿಚ್ಚಿದ್ದು ನೋಡಿದ್ದೇನೆ. ಅವನೂ ಬಿಚ್ಚಲಿ ಎಂದು ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದಾರೆ.

Edited By : Nagaraj Tulugeri
PublicNext

PublicNext

04/05/2022 05:38 pm

Cinque Terre

125.05 K

Cinque Terre

8

ಸಂಬಂಧಿತ ಸುದ್ದಿ