ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಯುಪಿನಲ್ಲಿ ಹೆಣ್ಣು ಮಕ್ಕಳಿಗೆ ರಕ್ಷಣೆ ಇಲ್ಲ ; ಯೋಗಿ ವಿರುದ್ಧ ಗುಡುಗಿದ ದೀದಿ

ಕೋಲ್ಕತ್ತಾ: ಉತ್ತರ ಪ್ರದೇಶದಲ್ಲಿ ದಿನದಿಂದ ದಿನಕ್ಕೆ ಅತ್ಯಾಚಾರದ ಪ್ರಕರಣಗಳು ಹೆಚ್ಚಾಗುತ್ತಿವೆ. ಇನ್ನು ಸಂತ್ರಸ್ತ ಹೆಣ್ಣುಮಕ್ಕಳು ನ್ಯಾಯ ಕೇಳಲು ಹೋದರೆ, ಅವರನ್ನೇ ಆರೋಪಿಗಳ ಸ್ಥಾನದಲ್ಲಿ ನಿಲ್ಲಿಸುತ್ತಾರೆ ಎಂದು ದೀದಿ ಯೋಗಿ ಸರ್ಕಾರವನ್ನು ದೂರಿದ್ದಾರೆ.ಹೌದು ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರದ ವಿರುದ್ಧ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಾಗ್ದಾಳಿ ನಡೆಸಿದ್ದಾರೆ.

ಯುಪಿಯಲ್ಲಿ ಅತ್ಯಾಚಾರ ಸಂತ್ರಸ್ತೆಯರನ್ನೇ ಆರೋಪಿಗಳ ಸ್ಥಾನದಲ್ಲಿ ನಿಲ್ಲಿಸುತ್ತಾರೆ. ಆದರೆ ನಮ್ಮ ರಾಜ್ಯದಲ್ಲಿ ನಮ್ಮ ಪಕ್ಷದ ಕಾರ್ಯಕರ್ತ ತಪ್ಪು ಮಾಡಿದ್ದರೂ ಸುಮ್ಮನೆ ಬಿಡುವುದಿಲ್ಲ ಎಂದು ತಿಳಿಸಿದ್ದಾರೆ. ಇತರರು ನನ್ನ ಬಗ್ಗೆ ಏನು ಹೇಳಿದರೂ ನಾನು ತಲೆಕೆಡಿಸಿಕೊಳ್ಳುವುದಿಲ್ಲ. ನನ್ನ ಜನರಿಗೆ ಪ್ರಜಾಪ್ರಭುತ್ವದ ಬಗ್ಗೆ ಕಾಳಜಿ ಇದೆ. ದುರ್ಗಾ ಪೂಜೆ ಮಾಡುವವರು ಈದ್ ಕೂಡ ಆಚರಿಸುತ್ತಾರೆ. ನಾವು ಎಲ್ಲಾ ಹಬ್ಬಗಳನ್ನು ಒಟ್ಟಿಗೆ ಆಚರಿಸುತ್ತೇವೆ ಎಂದು ಪರೋಕ್ಷವಾಗಿ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ನಮ್ಮ ಸರ್ಕಾರಕ್ಕೆ 11 ವರ್ಷಗಳಾಗಿವೆ. ನನ್ನ ವಿರುದ್ಧ ಮಾತನಾಡುವುದು, ದಾರಿತಪ್ಪಿಸುವುದು ಮತ್ತು ಷಡ್ಯಂತ್ರ ರೂಪಿಸುವುದರಿಂದ ಯಾವುದೇ ಪ್ರಯೋಜನವಿಲ್ಲ. ನಾನು ಅಧಿಕಾರದಲ್ಲಿ ಇರುವವರೆಗೂ ಬಂಗಾಳಕ್ಕಾಗಿ ದುಡಿಯುತ್ತೇನೆ. ಎಂದಿದ್ದಾರೆ.

Edited By : Nirmala Aralikatti
PublicNext

PublicNext

05/05/2022 10:19 pm

Cinque Terre

91.18 K

Cinque Terre

39