ಬೆಂಗಳೂರು: ಪಿಎಸ್‌ಐ ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣದಲ್ಲಿ ಸಿಐಡಿ ನೋಟಿಸ್‌ಗೆ ಉತ್ತರಿಸಿರುವ ಶಾಸಕ ಪ್ರಿಯಾಂಕ್ ಖರ್ಗೆ ವಿಚಾರಣೆಗೆ ಖುದ್ದಾಗಿ ಹಾಜರಾಗಲು ನಿರಾಕರಿಸಿದ್ದಾರೆ.
ಈ ಬಗ್ಗೆ ಸ್ಪಷ್ಟನೆ ನೀಡಿರುವ ಪ್ರಿಯಾಂಕ್ ಖರ್ಗೆ, ಬೇಕಾದ್ರೆ ಜೈಲಿಗೆ ಹೋಗ್ತೀನಿ ಆದ್ರೆ ವಿಚಾರಣೆಗೆ ಹಾಜರಾಗೋದಿಲ್ಲ ಎಂದಿದ್ದಾರೆ. ಇನ್ನೊಂದೆ ಇಡಿ ಕಾಂಗ್ರೆಸ್ ನಾಯಕರು ಪ್ರಿಯಾಂಕ್ ಖರ್ಗೆ ಬೆಂಬಲಕ್ಕೆ ನಿಂತಿದ್ದಾರೆ. ಪೊಲೀಸರಿಗೆ ನೋಟಿಸ್ ಕೊಡುವ ಅಧಿಕಾರವೇ ಇಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಇನ್ನೊಂದೆಡೆ ಡಿ.ಕೆ ಶಿವಕುಮಾರ್, ಪ್ರಿಯಾಂಕ್ ಖರ್ಗೆ ಅವರು ಒಬ್ಬ ದಲಿತ ನಾಯಕ ಎಂಬ ಕಾರಣಕ್ಕೆ ಈ ರೀತಿ ದೌರ್ಜನ್ಯ ಮಾಡಲಾಗುತ್ತಿದೆ ಎಂದಿದ್ದಾರೆ.
PublicNext
06/05/2022 10:30 am