ದೆಹಲಿ: ಭಾರತದಲ್ಲಿ ಕೋವಿಡ್ ಸಮಯದಲ್ಲಿ 47 ಲಕ್ಷ ಭಾರತೀಯರು ಸಾವನ್ನಪ್ಪಿದ್ದಾರೆ ಎಂದು ವಿಶ್ವ ಆರೋಗ್ಯ ಸಂಸ್ಥೆ (WHO) ಹೇಳಿದೆ. ಸರ್ಕಾರ ಹೇಳಿಕೊಂಡಂತೆ 4.8 ಲಕ್ಷ ಅಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇಂದ್ರದ ವಿರುದ್ಧ ಕಿಡಿಕಾರಿದ್ದಾರೆ.ವಿಜ್ಞಾನವು ಸುಳ್ಳು ಹೇಳುವುದಿಲ್ಲ. ಮೋದಿ ಸುಳ್ಳು ಹೇಳುತ್ತಾರೆ ಎಂದಿರುವ ರಾಹುಲ್ ಕೋವಿಡ್ ಸಾಂಕ್ರಾಮಿಕ ರೋಗದಿಂದಾಗಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳನ್ನು ಗೌರವಿಸಿ. ಕಡ್ಡಾಯವಾಗಿ ₹ 4 ಲಕ್ಷ ಪರಿಹಾರದೊಂದಿಗೆ ಅವರನ್ನು ಬೆಂಬಲಿಸಿ ಎಂದು ರಾಹುಲ್ ಟ್ವೀಟ್ ಮಾಡಿದ್ದಾರೆ.
ರಾಹುಲ್ ಗಾಂಧಿಯವರ ಆರೋಪಗಳಿಗೆ ಪ್ರತಿಕ್ರಿಯಿಸಿದ ಬಿಜೆಪಿ, ವಿಶ್ವ ಆರೋಗ್ಯ ಸಂಸ್ಥೆಯ ಡೇಟಾ ಮತ್ತು ಕಾಂಗ್ರೆಸ್ ನ “ಬೇಟಾ” (ಮಗ) ತಪ್ಪಾಗಿದೆ ಎಂದು ಆರೋಪಿಸಿ ಕಾಂಗ್ರೆಸ್ ನಾಯಕ ಕೊವಿಡ್ ಸಾವಿನ ಬಗ್ಗೆ ರಾಜಕೀಯ ಮಾಡುತ್ತಿದ್ದಾರೆ ಎಂದಿದ್ದಾರೆ.
PublicNext
06/05/2022 05:53 pm