ಬೆಂಗಳೂರು : 2022- 23 ನೇ ಆಯವ್ಯಯದಲ್ಲಿ ಘೋಷಣೆಯಾಗಿರುವ ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಇಂದು ಪಶು ಸಂಗೋಪನಾ ಇಲಾಖೆ ಸಭೆ ಜರುಗಿತು.
ಸಭೆಯಲ್ಲಿ ಪಶು ಸಂಗೋಪನಾ ಇಲಾಖೆ ಸಚಿವ ಪ್ರಭು ಚವ್ಹಾಣ, ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಅಭಿವೃದ್ಧಿ ಆಯುಕ್ತೆ ಹಾಗೂ ಅಪರ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್. ಪ್ರಸಾದ್, ಯೋಜನಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ: ಶಾಲಿನಿ ರಜನೀಶ್, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್,
ಪಶು ಸಂಗೋಪನಾ ಇಲಾಖೆ ಕಾರ್ಯದರ್ಶಿ ಸಲ್ಮಾ, ಆಯುಕ್ತ ಬಸವರಾಜೇಂದ್ರ, ನಿರ್ದೇಶಕ ಮಂಜುನಾಥ ಪಾಳೇಗಾರ, ಕೆಎಂಎಫ್ ಎಂ ಡಿ ಸತೀಶ ಮತ್ತಿತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
PublicNext
06/05/2022 07:26 pm