ಬೆಂಗಳೂರು : ಸೌಂದರ್ಯವರ್ಧಕಗಳಲ್ಲಿ ಹಾಗೂ ಔಷಧಗಳಲ್ಲಿ ಬಳಸಲಾಗುವ ಮೆಣಸಿನಕಾಯಿಯಿಂದ ಔಷಧಿಯುಕ್ತ ತೈಲ ಉತ್ಪಾದನೆಯ ಸಾಧ್ಯತೆಗಳ ಬಗ್ಗೆ ರೂಪುರೇಷೆ ಸಿದ್ಧಪಡಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದರು.
2022-23 ನೇ ಸಾಲಿನ ಆಯವ್ಯಯ ಘೋಷಣೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ತೋಟಗಾರಿಕಾ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.
ಸಭೆಯ ಮುಖ್ಯಾಂಶಗಳು:
1. ಮೆಣಸು ಮತ್ತು ಇತರೆ ಸಾಂಬಾರು ಪದಾರ್ಥಗಳ ಗುಣಮಟ್ಟವನ್ನು ಹೆಚ್ಚಿಸಲು ಬ್ಯಾಡಗಿಯಲ್ಲಿ ಸಂಶೋಧನಾ ಕೇಂದ್ರ ಸ್ಥಾಪಿಸುವ ಬಗ್ಗೆ ವ್ಯಾಪಾರಸ್ಥರ ಸಲಹೆ ಪಡೆಯುವುದು.
2. ತೋಟಗಾರಿಕೆಯಲ್ಲಿ ವಿನೂತನ ತಂತ್ರಜ್ಞಾನ ಹಾಗೂ ಯಂತ್ರೋಪಕರಣಗಳನ್ನು ಅಳವಡಿಸುವ ನಿಟ್ಟಿನಲ್ಲಿ ಐಐಎಸ್ಸಿ ತಜ್ಞರಿಂದ ಸಲಹೆ ಪಡೆದುಕೊಳ್ಳುವುದು.
3. ಕೊಡಗು ಮತ್ತು ಜಾಂಬೋಟಿ ಜೇನುತುಪ್ಪಗಳನ್ನು ಜನಪ್ರಿಯಗೊಳಿಸಲು ಹಾಗೂ ಹೆಚ್ಚಿಸಲು ಸುಧಾರಿತ ಮಾರುಕಟ್ಟೆ ವ್ಯವಸ್ಥೆ ಕೈಗೊಳ್ಳಲು ಕ್ರಮ ವಹಿಸುವುದು.
4. ಬೆಂಗಳೂರಿನ ಯಲಹಂಕದಲ್ಲಿ ಅಟಲ್ ಬಿಹಾರಿ ವಾಜಪೇಯಿ ಉದ್ಯಾನವನವನ್ನು ಅಭಿವೃದ್ಧಿಪಡಿಸಲು ಉದ್ದೇಶಿಸಿದ್ದ ಸ್ಥಳವನ್ನು ತೋಟಗಾರಿಕೆ ಇಲಾಖೆಗೆ ಒಳಪಡುವ ಜಮೀನಿಗೆ ಬದಲಾಯಿಸಲು ಸೂಚಿಸಿದರು.
PublicNext
06/05/2022 10:39 pm