ಬೆಂಗಳೂರು: ಪಿಎಸ್ ಐ ಹುದ್ದೆ ನೇಮಕಾತಿ ಅಕ್ರಮ, ಸಿಎಂ ಹುದ್ದೆಗೆ 2,500 ಕೋಟಿ ರೂ. ಬೇಡಿಕೆ ಇಟ್ಟಿದ್ದರು ಎಂದು ಹೇಳಿದ ಬಿಜೆಪಿ ಶಾಸಕ ಯತ್ನಾಳ್ ಹೇಳಿಕೆ ಬೆನ್ನಲ್ಲೇ ಇಂದು ಸಂಜೆ 4 ಕ್ಕೆ ಸಿಎಂ ಬಸವರಾಜ್ ಬೊಮ್ಮಾಯಿ ದಿಢೀರ್ ಸುದ್ದಿಗೋಷ್ಠಿ ಕರೆದಿರುವುದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.
ಇಂದು ಸಂಜೆ 4 ಕ್ಕೆ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹಾಗೂ ಸಿ.ಟಿ.ರವಿ ಜಂಟಿ ಸುದ್ದಿಗೋಷ್ಠಿ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.ಇನ್ನು ಯತ್ನಾಳ್ ಹೇಳಿಕೆ ಬೆನ್ನಲ್ಲೇ ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷಗಳು ಭ್ರಷ್ಟಾಚಾರದ ಆರೋಪ ಮಾಡುತ್ತಿದ್ದು, ಗೃಹ ಸಚಿವರು ಹಾಗೂ ಉನ್ನತ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿದ್ದಾರೆ. ಇಂದು ಸಿಎಂ ಸುದ್ದಿಗೋಷ್ಠಿಯಲ್ಲಿ ಯಾವ ವಿಚಾರಕ್ಕೆ ಎನ್ನುವುದೇ ಕುತೂಹಲ.
PublicNext
07/05/2022 01:32 pm