ಬೆಂಗಳೂರು: 'ದೆಹಲಿಯಿಂದ ನನ್ನ ಬಳಿಗೆ ಬಂದಿದ್ದ ಕೆಲವರು, ನಿಮ್ಮನ್ನು ಮುಖ್ಯಮಂತ್ರಿ ಮಾಡ್ತೀವಿ 2,500 ಕೋಟಿ ರೂ. ಸಿದ್ಧವಿಟ್ಟುಕೊಳ್ಳಿ ಎಂದಿದ್ದರು' ಎಂಬ ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿಕೆ ಭಾರಿ ಚರ್ಚೆಗೆ ಗ್ರಾಸವಾಗಿದೆ. ಈ ಸಂಬಂಧ ಕಾಂಗ್ರೆಸ್, ಜೆಡಿಎಸ್ ನಾಯಕರು ಬಿಜೆಪಿ ಸರ್ಕಾರವನ್ನು ಫುಲ್ ತರಾಟೆಗೆ ತೆಗೆದುಕೊಂಡಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು, ಆತ್ಮೀಯ ಕನ್ನಡಿಗರೇ, ನಿಮಗೆ ಯಾರು ಬೇಕು? 6 ಕೋಟಿ ಜನರ ಮುಖ್ಯಮಂತ್ರಿ? ಅಥವಾ 2,500 ಕೋಟಿ ರೂ. ಸಿಎಂ ಎಂದು ಪ್ರಶ್ನಿಸಿದ್ದಾರೆ.
PublicNext
07/05/2022 04:28 pm