ಬೆಂಗಳೂರು: ಕಾಯಕದಲ್ಲಿಯೇ ಸ್ವರ್ಗವನ್ನು ಕಾಣುವ, ಸಮಾನತೆ, ಸಮಾನ ಅವಕಾಶಗಳನ್ನು ಒದಗಿಸುವ ಹಾಗೂ ಸೈದ್ಧಾಂತಿಕ ಮತ್ತು ವೈಜ್ಞಾನಿಕ ಚಿಂತನೆ ಮಾಡುವ ಸಮಾಜ ನಿರ್ಮಾಣವನ್ನು ಬಸವಣ್ಣನವರು ಬಯಸಿದ್ದರು ಹಾಗೂ ಮಾಡಿದ್ದರು. ಹೀಗಾಗಿ ಬಸವಪಥದಲ್ಲಿಯೇ ನಮ್ಮ ಸರ್ಕಾರ ಮುನ್ನಡೆಯುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಬಸವ ವೇದಿಕೆ ಆಯೋಜಿಸಿದ್ದ ಬಸವ ಜಯಂತಿ ಸಮಾರಂಭ ಹಾಗೂ ಬಸವಶ್ರೀ ಮತ್ತು ವಚನ ಸಾಹಿತ್ಯಶ್ರೀ ಪ್ರಶಸ್ತಿ ಪ್ರದಾನ ಹಾಗೂ ರಜತ ಮಹೋತ್ಸವ-2022”ರ ಕಾರ್ಯಕ್ರಮದಲ್ಲಿ ಇಂದು ಪಾಲ್ಗೊಂಡು ಮಾತನಾಡಿದ ಅವರು, 'ಸರ್ಕಾರ ದುಡಿಯುವ ಅವಕಾಶವಿಲ್ಲದವರಿಗೆ ಅವಕಾಶಗಳನ್ನು ಕಲ್ಪಿಸುತ್ತಿದೆ. ಆರ್ಥಿಕತೆ ಎಂದರೆ ದುಡ್ಡಲ್ಲ. ಅದು ಜನರ ದುಡಿಮೆ. ದುಡಿಮೆಯೇ ದೊಡ್ಡಪ್ಪ ಎಂದು ಬದಲಾಯಿಸುತ್ತಿದ್ದೇವೆ. ದೇಶವನ್ನು ರೈತರು ಮತ್ತು ಕಾರ್ಮಿಕರು ಕಟ್ಟುತ್ತಿದ್ದಾರೆ. ಕರ್ತವ್ಯಕ್ಕೂ ಕಾಯಕಕ್ಕೂ ವ್ಯತ್ಯಾಸವಿಲ್ಲ. ಕಾಯಕವನ್ನು ನಿಷ್ಠೆಯಿಂದ ಮಾಡಿದರೆ ಅದೇ ಪೂಜೆ ಹಾಗೂ ಸ್ವರ್ಗ ಎನ್ನುವುದು ಬಸವಣ್ಣನ ಚಿಂತನೆ ಎಂದರು.
ಮುಂದಿನ ವರ್ಷ ಬಸವ ಪ್ರಶಸ್ತಿ ಸಮಾರಂಭವನ್ನು ರಾಷ್ಟ್ರ ಮಟ್ಟದಲ್ಲಿ ದೆಹಲಿಯಲ್ಲಿ ಹಮ್ಮಿಕೊಳ್ಳಬೇಕು ಎಂದು ಮುಖ್ಯ ಮಂತ್ರಿ ಬೊಮ್ಮಾಯಿ ತಿಳಿಸಿದರು.
PublicNext
07/05/2022 07:04 pm