ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಇನ್ನು ಮೂರು ದಿನಗಳಲ್ಲಿ ಸಂಪುಟ ವಿಸ್ತರಣೆ ಅಥವಾ ಪುನಾರಚನೆ: ಯಡಿಯೂರಪ್ಪ

ಬೆಂಗಳೂರು: ಇನ್ನು ಮೂರು ದಿನಗಳಲ್ಲಿ ರಾಜ್ಯ ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಆಗಲಿದೆ ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.

ಶನಿವಾರ ದುಬೈ ಪ್ರವಾಸಕ್ಕೆ ತೆರಳುವ ಮುನ್ನ ಕಾವೇರಿ ನಿವಾಸದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ವಿಚಾರದಲ್ಲಿ ಹೈಕಮಾಂಡ್‌ ತೆಗೆದುಕೊಳ್ಳುವ ತೀರ್ಮಾನಕ್ಕೆ ನಾವು ಬದ್ಧವಾಗಿರುತ್ತೇವೆ. ಕೇಂದ್ರ ನಾಯಕರ ನಿರ್ಧಾರವೇ ಇದರಲ್ಲಿ ಅಂತಿಮವಾಗಿರಲಿದೆ. ಆದರೆ, ಇನ್ನು ಮೂರು ದಿನದಲ್ಲಿ ಸಂಪುಟ ವಿಸ್ತರಣೆ ಅಥವಾ ಪುನಾರಚನೆಯಾಗುತ್ತದೆ’ ಎಂದರು.

ಅನೇಕರು ಬಿಜೆಪಿಗೆ ಬರ್ತಾರೆ: ‘ಬಹಳಷ್ಟುಮಂದಿ ಬಿಜೆಪಿ ಬರುವವರಿದ್ದಾರೆ. ನಮ ಪಕ್ಷ ಮತ್ತಷ್ಟು ಬಲವಾಗಲಿದೆ. ನಮ್ಮ ಗುರಿಯಾದ 150 ಸ್ಥಾನಗಳಲ್ಲಿ ಪಕ್ಷ ಗೆಲುವು ಸಾಧಿಸಲಿದೆ. ಪ್ರಧಾನಿಯವರಿಗೆ 150 ಕ್ಷೇತ್ರ ಗೆಲ್ಲುವ ಆಶ್ವಾಸನೆ ನೀಡಿದ್ದೇವೆ. ಆ ಗುರಿ ಮಟ್ಟಲು ರಾಜ್ಯ ಪ್ರವಾಸ ಕೈಗೊಳ್ಳುತ್ತೇವೆ. ಪ್ರತಿ ಜಿಲ್ಲೆಯಿಂದಲೂ ಪಕ್ಷಕ್ಕೆ ಬರುತ್ತಾರೆ. ಅದರಲ್ಲಿಯೂ ಮಂಡ್ಯದಿಂದ ಅನೇಕ ಜನ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ’ ಎಂದು ತಿಳಿಸಿದರು.

Edited By : Nagaraj Tulugeri
PublicNext

PublicNext

08/05/2022 08:44 pm

Cinque Terre

35.65 K

Cinque Terre

0

ಸಂಬಂಧಿತ ಸುದ್ದಿ