ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೌತುಕ ಮೂಡಿಸಿದ ಬೊಮ್ಮಾಯಿ-ಜೋಶಿ ಭೇಟಿ

ಬೆಂಗಳೂರು: ಪ್ರಸಕ್ತ ರಾಜಕೀಯ ವಿದ್ಯಮಾನಗಳ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ್‌ ಜೋಶಿ ಅವರು ಗೌಪ್ಯವಾಗಿ ಚರ್ಚೆ ನಡೆಸಿರುವುದು ತೀವ್ರ ಕುತೂಹಲ ಮೂಡಿಸಿದೆ.

ಶನಿವಾರ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಲಾಂಜ್‌ನಲ್ಲಿ ಉಭಯ ನಾಯಕರು ಮಾತುಕತೆ ನಡೆಸಿದರು ಎಂದು ತಿಳಿದುಬಂದಿದೆ. ಈ ವೇಳೆ ‘ನನಗೆ ಸಿಎಂ ಆಗಲು 2500 ಕೋಟಿ ರು. ಕೇಳಲಾಗಿತ್ತು’ ಎಂಬ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹೇಳಿಕೆ, ಸಚಿವ ಸಂಪುಟ ಪುನಾರಚನೆ ಸೇರಿದಂತೆ ಹಲವು ವಿಚಾರಗಳ ಕುರಿತು ಸಮಾಲೋಚನೆ ನಡೆಸಿದರು ಎಂದು ಹೇಳಲಾಗಿದೆ.

ಆಡಳಿತಾರೂಢ ಪಕ್ಷದ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹೇಳಿಕೆಯು ಪಕ್ಷಕ್ಕೆ ತೀವ್ರ ಮುಜಗರನ್ನುಂಟು ಮಾಡಿದೆ. ಇಂತಹ ಹೇಳಿಕೆಗಳು ಪಕ್ಷದ ಕಾರ್ಯಕರ್ತರಿಗೆ, ಬೆಂಬಲಿಗರಿಗೆ ತಪ್ಪು ಸಂದೇಶ ರವಾನಿಸಿದಂತಾಗುತ್ತದೆ. ಅಲ್ಲದೇ, ಸರ್ಕಾರಕ್ಕೂ ಮುಜುಗರವನ್ನುಂಟು ಮಾಡುತ್ತಿದೆ. ಈ ಬಗ್ಗೆ ಯತ್ನಾಳ್‌ಗೆ ಎಚ್ಚರಿಕೆ ನೀಡಬೇಕಾಗಿದೆ. ಅಲ್ಲದೆ, ರಾಜ್ಯವನ್ನೇ ತಲ್ಲಣಗೊಳಿಸಿರುವ ಪಿಎಸ್‌ಐ ನೇಮಕಾತಿ ಹಗರಣ, ಸಚಿವ ಸಂಪುಟ ಪುನಾರಚನೆ ಸಂಬಂಧ ಉಭಯ ನಾಯಕರು ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.

Edited By : Nagaraj Tulugeri
PublicNext

PublicNext

08/05/2022 09:42 pm

Cinque Terre

65.66 K

Cinque Terre

1

ಸಂಬಂಧಿತ ಸುದ್ದಿ