ಬೆಳಗಾವಿ : ಜನಾಶೀರ್ವಾದದಿಂದ 2023ರ ಚುನಾವಣೆಯಲ್ಲಿ ನಾವು ಮತ್ತೆ ಅಧಿಕಾರಕ್ಕೆ ಬಂದರೆ ಪ್ರತಿ ಕುಟುಂಬ ಪ್ರತಿ ಸದಸ್ಯರಿಗೆ ಉಚಿತವಾಗಿ 10 ಕೆಜಿ ಅಕ್ಕಿ ನೀಡುತ್ತೇವೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ರಾಮದುರ್ಗ ತಾಲೂಕಿನ ಅವರಾದಿ ಗ್ರಾಮದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಪುತ್ಥಳಿ ಉದ್ಘಾಟಿಸಿ ಮಾತನಾಡಿದ ಅವರು, ಅಗತ್ಯವಸ್ತು ಬೆಲೆ ದುಪ್ಪಟ್ಟಾಗಿದೆ. ಪಿಎಸ್ ಐ ನೇಮಕಾತಿಯಲ್ಲಿ ಅಕ್ರಮ. ಇಂಥ ಸರ್ಕಾರವನ್ನು ಬೇರು ಸಮೇತ ಕಿತ್ತು ಎಸೆದಾಗ ದೇಶ, ನಾವು, ನೀವು ಉಳಿಯುತ್ತೇವೆ. ಈ ಸರ್ಕಾರಕ್ಕೆ ಕಣ್ಣು ಕಾಣಿಸಲ್ಲ, ಕಿವಿಯೂ ಕೇಳಿಸಲ್ಲ. ಈ ಸರ್ಕಾರದ್ದು ಎಮ್ಮೆ ಚರ್ಮ ಅಲ್ಲ, ಘೇಂಡಾಮೃಗದ ಚರ್ಮ ಎಂದು ಕಿಡಿಕಾರಿದರು.
ಕೈಜೋಡಿಸಿ ಪ್ರಾರ್ಥನೆ ಮಾಡುತ್ತೇನೆ, ಮತ್ತೆ ಕಾಂಗ್ರೆಸ್ಗೆ (Congress) ಅವಕಾಶ ಕೊಡಿ. ಕೊರೊನಾ ಕಾಲದಲ್ಲಿ ಅನ್ನಭಾಗ್ಯ ಕಾರ್ಯಕ್ರಮ ಇಲ್ಲದಿದ್ದರೆ ಜನ ಬದುಕಲು ಆಗುತ್ತಿತ್ತಾ? ರಾಜ್ಯದಲ್ಲೀಗ ಜನ ವಿರೋಧಿ ಸರ್ಕಾರ ಅಧಿಕಾರದಲ್ಲಿದೆ. ಈ ಸರ್ಕಾರ ಯಾವುದೇ ಕಾರಣಕ್ಕೂ ಮುಂದುವರಿಯಬಾರದು ಎಂದು ಆಕ್ರೋಶ ಹೊರಹಾಕಿದರು.
ನಾನು ಮುಖ್ಯಮಂತ್ರಿಯಾಗಿದ್ದಾಗ ರಾಜ್ಯದಲ್ಲಿ 15 ಲಕ್ಷ ಮನೆ ಕಟ್ಟಿಸಿಕೊಟ್ಟಿದ್ದೆ. ಇವರ ಜನ್ಮಕ್ಕೆ ಒಂದು ಮನೆ ಕಟ್ಟಿಸಿಕೊಡಲೂ ಆಗಿಲ್ಲ. ಏಳು ಕೆ.ಜಿ. ಅಕ್ಕಿಯನ್ನು ನಾನು ಉಚಿತವಾಗಿ ಕೊಟ್ಟಿದ್ದೆ. ಈಗ ಅವರು ಅದರಲ್ಲೂ ಎರಡು ಕೆ.ಜಿ. ಕಡಿಮೆ ಮಾಡಿದ್ದಾರೆ. ಮುಂದೇನು ಮಾಡ್ತಾರೋ ಗೊತ್ತಿಲ್ಲ ಎಂದರು.
PublicNext
09/05/2022 05:47 pm