ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳವಾರ ಬೆಳಿಗ್ಗೆ 8 ಗಂಟೆಗೆ ನವದೆಹಲಿಗೆ ತೆರಳಿದ್ದು, ಕರ್ನಾಟಕದಲ್ಲಿ ಬಂಡವಾಳ ಹೂಡಿಕೆಗೆ ಸಂಬಂಧಿಸಿದಂತೆ ವಿವಿಧ ದೇಶಗಳ ರಾಯಭಾರಿಗಳ ಜತೆ ಸಭೆ ನಡೆಸಲಿದ್ದಾರೆ. ಇದೇ ವೇಳೆ ಹೈಕಮಾಂಡ್ ನಾಯಕರನ್ನ ಭೇಟಿ ಮಾಡುವ ಸಾಧ್ಯತೆ ಇದೆ.
ಸಿಎಂ ಬೊಮ್ಮಾಯಿ ಅವರು ದೆಹಲಿಯಿಂದ ನಾಳೆ ಬೆಳಗ್ಗೆ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ. ಆರ್.ಟಿ.ನಗರ ನಿವಾಸದಿಂದ ಕೆಂಪೇಗೌಡ ಏರ್‌ಪೋರ್ಟ್‌ಗೆ ಪಯಣ ಬೆಳೆಸಿದ ಸಿಎಂ, ಇದಕ್ಕೂ ಮುನ್ನ ಹಲವು ಬಿಜೆಪಿ ನಾಯಕರ ಜೊತೆ ಚರ್ಚೆ ನಡೆಸಿದರು. ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಅರವಿಂದ್ ಬೆಲ್ಲದ್, ಹರತಾಳು ಹಾಲಪ್ಪ ಅವರೊಂದಿಗೆ ಸಿಎಂ ಚರ್ಚೆ ನಡೆಸಿದರು.
PublicNext
10/05/2022 09:05 am