ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನವದೆಹಲಿ: ಸಚಿವ ಸಂಪುಟ ವಿಸ್ತರಣೆ ಸುಳಿವು ನೀಡಿದ: ಸಿಎಂ

ನವದೆಹಲಿ: ರಾಜ್ಯದ ಸಚಿವ ಸಂಪುಟದ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಜತೆ ಸಮಾಲೋಚನೆ ನಡೆಸಲಾಗಿದೆ.

ಸಂಪುಟ ವಿಸ್ತರಣೆ ವಿಚಾರಕ್ಕೆ ಸಂಬಂಧಿಸಿದಂತೆ ಯಾವಾಗ ಏನೂ ಬೇಕಾದರೂ ಆಗಬಹುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ನವದೆಹಲಿಯಲ್ಲಿ ಅಮಿತ್ ಶಾ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು.

ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ಭೇಟಿಯಾಗಿ ರಾಜಕೀಯ ಸ್ಥಿತಿಗತಿಗಳು, ಸಚಿವ ಸಂಪುಟದ ಬಗ್ಗೆ ಚರ್ಚಿಸಲಾಗಿದೆ. ಸ್ಥಳಿಯ ಸಂಸ್ಥೆಗಳ ವಿಚಾರದಲ್ಲಿ ಸರ್ವೋಚ್ಚ ನ್ಯಾಯಾಲಯದ ಆದೇಶದ ಪರಿಣಾಮಗಳೇನು, ಚುನಾವಣಾ ಆಯೋಗದ ನಿರ್ಧಾರ, ಸಚಿವ ಸಂಪುಟದ ವಿಸ್ತರಣೆ ಇವೆಲ್ಲವುಗಳ ತೀರ್ಮಾನಗಳೆಲ್ಲವನ್ನೂ ಬಿ.ಜೆ.ಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರೊಂದಿಗೆ ಚರ್ಚಿಸಲಾಗುವುದು. ಬರುವ ಎರಡು ಮೂರು ದಿನಗಳ ರಾಜಕೀಯ ಬೆಳವಣಿಗೆಯ ಆಧಾರದ ಮೇಲೆ ನಿರ್ಣಯವನ್ನು ತಿಳಿಸುವುದಾಗಿ ಹೇಳಿದ್ದಾರೆ.

ಮುಂಬರಲಿರುವ ರಾಜ್ಯ ಸಭಾ, ವಿಧಾನ ಪರಿಷತ್, ಸ್ಥಳೀಯ ಸಂಸ್ಥೆಗಳ ಚುನಾವಣೆ ಹಾಗೂ ಸಚಿವ ಸಂಪುಟದ ಬಗ್ಗೆ ಸುದೀರ್ಘವಾದ ಚರ್ಚೆ ಮಾಡಲಾಗಿದೆ ಎಂದರು.

ಸಚಿವ ಸಂಪುಟ ವಿಸ್ತರಣೆ ಬಗ್ಗೆ ಪ್ರಶ್ನೆಯೊಂದಕ್ಕೆ ಉತ್ತರಿಸಿ, ಒಟ್ಟಾರೆ ರಾಜಕೀಯ ಸ್ಥಿತಿಗತಿಗಳ ಆಧಾರದ ಮೇಲೆ ನಿರ್ಣಯಗಳು ಆಗುತ್ತವೆ. ಸ್ಥಿತಿ ಗತಿಗಳನ್ನು ಅವರಿಗೆ ವಿವರಿಸಲಾಗಿದೆ. ಮುಂದಿನ ಒಂದು ವಾರ ಬಹಳ ಮುಖ್ಯ. ರಾಜ್ಯದಲ್ಲಿ ಸ್ಥಳೀಯ ಸಂಸ್ಥೆಗಳ ದೊಡ್ಡ ಪ್ರಮಾಣದ ಚುನಾವಣೆ ಇರುವುದರಿಂದ ಅದರ ಪರಿಣಾಮಗಳೇನು ಎಂದು ಅಧ್ಯಯನ ಮಾಡಿ ತಿಳಿಸುವುದಾಗಿ ಹೇಳಿದ್ದಾ

Edited By :
PublicNext

PublicNext

11/05/2022 08:06 pm

Cinque Terre

51.69 K

Cinque Terre

0

ಸಂಬಂಧಿತ ಸುದ್ದಿ