ಬೆಂಗಳೂರು: ಮತಾಂತರ ನಿಷೇಧ ವಿಧೇಯಕವನ್ನು ಸುಗ್ರೀವಾಜ್ಞೆಯ ಮೂಲಕ ಜಾರಿಗೆ ತರಲು ಸಚಿವ ಸಂಪುಟದ ಸದಸ್ಯರು ಓಕೆ ಎಂದಿದ್ದಾರೆ.
ಹೌದು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ, ವಿಧಾನಸಭೆಯಲ್ಲಿ ಅಂಗೀಕಾರಗೊಂಡು, ಪರಿಷತ್ ನಲ್ಲಿ ಅಂಗೀಕಾರಗೊಳ್ಳದೇ ಇದ್ದಂತ ಮತಾಂತರ ನಿಷೇಧ ಕಾಯ್ದೆಯನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ತರೋದಕ್ಕೆ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.
ಈ ಮೂಲಕ ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ಶೀಘ್ರವೇ ಸುಗ್ರೀವಾಜ್ಞೆ ಮೂಲಕ ಜಾರಿಗೊಳ್ಳಲಿದೆ.
PublicNext
12/05/2022 04:45 pm