ಬೆಂಗಳೂರು: ನನ್ನನ್ನು ಟ್ರೋಲ್ ಮಾಡಲು ನೀವು ಯಾವುದೇ ತೊಂದರೆ ತೆಗೆದುಕೊಳ್ಳಬೇಡಿ. ನನ್ನನ್ನು ನಾನೇ ಟ್ರೋಲ್ ಮಾಡಿಕೊಳ್ಳುತ್ತೇನೆ ಎಂದು ಮಾಜಿ ಸಂಸದೆ ಹಾಗೂ ನಟಿ ರಮ್ಯಾ ಪರೋಕ್ಷವಾಗಿ ಡಿ.ಕೆ.ಶಿವಕುಮಾರ್‌ಗೆ ಟಾಂಗ್ ನೀಡಿದ್ದರು. ಇದಕ್ಕೆ ಟ್ವೀಟ್ ಮೂಲಕ ಉತ್ತರಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಯಾರ‍್ಯಾರಿಗೆ ಏನೇನು ನೋವಿದೆಯೋ, ಏನೇನು ದುಗುಡ ಇದೆಯೋ ಗೊತ್ತಿಲ್ಲ ಎಂದಿದ್ದಾರೆ.
ಈ ಕುರಿತು ಪಕ್ಷದ ವೇದಿಕೆಯಲ್ಲಿ ಚರ್ಚೆ ಮಾಡ್ತೀವಿ. ನನಗೆ ರಮ್ಯಾ ಟ್ವೀಟ್ ವಿಚಾರ ಯಾವುದು ಗೊತ್ತಿಲ್ಲ. ಎಂ.ಬಿ ಪಾಟೀಲ್, ರಮ್ಯಾ ಇಬ್ಬರೂ ನಮ್ಮ ಪಕ್ಷದವರು. ಟ್ವೀಟ್ ವಿಚಾರದಲ್ಲಿ ಎಲ್ಲೋ ಗೊಂದಲವಾಗಿದೆ. ಅದನ್ನ ನಾವು ಸರಿಪಡಿಸಿಕೊಳ್ತೇವೆ ಎಂದು ಡಿಕೆಶಿ ಹೇಳಿದ್ದಾರೆ.
PublicNext
12/05/2022 05:24 pm