ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

'ನೀನೇ ಸಾಕಿದ ಗಿಣಿ, ನಿನ್ನ ಮುದ್ದಿನ ಗಿಣಿ ಹದ್ದಾಗಿ ಕುಕ್ಕಿತಲ್ಲೋ': ಡಿಕೆಶಿ ಕಾಲೆಳೆದ ಬಿಜೆಪಿ

ಬೆಂಗಳೂರು: "ನೀನೇ ಸಾಕಿದ ಗಿಣಿ, ನಿನ್ನ ಮುದ್ದಿನ ಗಿಣಿ, ಹದ್ದಾಗಿ ಕುಕ್ಕಿತ್ತಲ್ಲೋ”, ಇದು ಅಸಹಾಯಕ ಡಿಕೆಶಿ ಅವರ ಸದ್ಯದ ಸ್ಥಿತಿ. ಡಿಕೆಶಿ ಅವರೇ ಬೆಳೆಸಿದ ರಮ್ಯಾ ಈಗ ಡಿಕೆಶಿಗೆ ಸಾಮಾಜಿಕ ಮಾಧ್ಯಮದಲ್ಲಿ ಬುದ್ಧಿ ಮಾತು ಹೇಳುತ್ತಿದ್ದಾರೆ. ರಮ್ಯಾ ಅವರನ್ನು ಭ್ರಷ್ಟಾಧ್ಯಕ್ಷ ರ ವಿರುದ್ಧ ಛೂಬಿಟ್ಟಿದ್ದು ಮೀರ್‌ ಸಾದಿಕ್‌ ಅವರಿರಬಹುದೇ?" ಎಂದು ರಾಜ್ಯ ಬಿಜೆಪಿಯು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಕಾಲೆಳೆದಿದೆ.

ಈ ಬಗ್ಗೆ ಸರಣಿ ಟ್ವಿಟ್ ಮಾಡಿರುವ ರಾಜ್ಯ ಬಿಜೆಪಿ, 'ಕಾಂಗ್ರೆಸ್ ಈಗ ಒಂದು‌ ಒಡೆದ ಮನೆ. ಇಲ್ಲಿ ಯಾರ ಅಭಿಪ್ರಾಯವನ್ನು ಯಾರು ಸಮರ್ಥಿಸುತ್ತಾರೆ, ಯಾರು ವಿರೋಧಿಸುತ್ತಾರೆ ಎಂಬುದು ಯಾರಿಗೂ ಗೊತ್ತಿಲ್ಲ. ಎಂ.ಬಿ. ಪಾಟೀಲ್ ಹಾಗೂ ಅಶ್ವತ್ಥ್ ನಾರಾಯಣ ಅವರ ಭೇಟಿಯ ಬಗ್ಗೆ ಮಾತನಾಡಿದ ಅಸಹಾಯಕ ಡಿಕೆಶಿ ಅವರೀಗ ತಮ್ಮ ಸ್ವಂತ ಮನೆಯಲ್ಲೇ ಉಪವಾಸ ಮಾಡುವ ಸ್ಥಿತಿಯಲ್ಲಿದ್ದಾರೆ. ಹೀಗೇಕಾಯಿತು ಡಿಕೆ ಶಿವಕುಮಾರ್ ಅವರೇ? ಎಂದು ಪ್ರಶ್ನಿಸಿದೆ. 'ಅಕ್ರಮ ಸಂಪಾದನೆಯ ಹಣದ ಮೂಲಕ ಕಾಂಗ್ರೆಸ್‌ ಪಕ್ಷದಲ್ಲಿ ಏನೋ ಸಾಧನೆ ಮಾಡುತ್ತೇನೆ ಎಂದು ಕೆಪಿಸಿಸಿ ಅಧ್ಯಕ್ಷ ಸ್ಥಾನ ವಹಿಸಿಕೊಂಡ ಡಿಕೆ ಶಿವಕುಮಾರ್ ಅವರೀಗ ಅಸಹಾಯಕ ಡಿಕೆಶಿ ಆಗಿದ್ದಾರೆ. ಕೆಪಿಸಿಸಿ ಮನೆಯಲ್ಲಿ ಈಗ ಮೀರ್‌ ಸಾದಿಕ್‌ ಹಾವಳಿ ಜಾಸ್ತಿಯಾಗಿದ್ದು ನಿಜವೇ? ಗುಂಪುಗಾರಿಕೆ, ಬಣ, ಉಪಬಣ, ಆ ಬಣ ಈ ಬಣಗಳ ನಡುವೆಯೂ ಒಗ್ಗಟ್ಟಿನ ಮಂತ್ರವೇಕೆ?' ಎಂದಿದೆ.

'ತನ್ನ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ ಉಗ್ರಪ್ಪ ಅವರನ್ನು ಪಕ್ಕದಲ್ಲಿ ಕೂರಿಸಿಕೊಳ್ಳುವಷ್ಟು ಡಿಕೆ ಶಿವಕುಮಾರ್, ಅಸಹಾಯಕರೇ? ಅಲ್ಪಸಂಖ್ಯಾತ ಸಲೀಂ ಅವರನ್ನು ಕಿತ್ತೊಗೆದು ಉಗ್ರಪ್ಪ ಜೊತೆ ಪತ್ರಿಕಾಗೋಷ್ಠಿ ಮಾಡುವ ಮೂಲಕ ಯಾವ ಸಂದೇಶ ನೀಡುತ್ತಿದ್ದೀರಿ? ನೀವೆಂತಹ ಬಂಡೆ, ಕಲ್ಲುಬಂಡೆಯೋ ಅಥವಾ ಟೊಳ್ಳು ಬಂಡೆಯೋ?' ಎಂದು ವಾಗ್ದಾಳಿ ನಡೆಸಿದೆ. 'ಭ್ರಷ್ಟಾಧ್ಯಕ್ಷ ಡಿಕೆಶಿ ಅವರೇ, ನೀವು ನಿಜಕ್ಕೂ ಕೆಪಿಸಿಸಿ ಅಧ್ಯಕ್ಷರೇ? ಸಾರ್ವಜನಿಕ ಬದುಕಿನಿಂದ ಕಳೆದು ಹೋದವರೆಲ್ಲಈಗ ಬಂದು‌ ಕೆಪಿಸಿಸಿ ಅಧ್ಯಕ್ಷರಿಗೆ ಪಾಠ ಹೇಳುತ್ತಿರುವುದನ್ನು ನೋಡಿದರೆ, ಕನಕಪುರದ ಬಂಡೆ ಎಷ್ಟು ಗಟ್ಟಿ ಎಂದು ಯೋಚಿಸಬೇಕಲ್ಲವೇ? ಡಿಕೆಶಿ ಅವರನ್ನು ಅಧೀರರನ್ನಾಗಿಸುವ ಹಿಂದೆ #ಮೀರ್‌ಸಾದಿಕ್‌ ತಂತ್ರವಿದೆಯೇ?' ಎಂದು ಹೇಳಿದೆ.

Edited By : Nagaraj Tulugeri
PublicNext

PublicNext

12/05/2022 08:19 pm

Cinque Terre

54.41 K

Cinque Terre

3

ಸಂಬಂಧಿತ ಸುದ್ದಿ