ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಜನತಾ ಜಲಧಾರೆ ಸಮಾರೋಪ ನಾಳೆ: ಇದು ಜೆಡಿಎಸ್ ಚುನಾವಣಾ ರಣಕಹಳೆ ಎಂದ ಎಚ್‌ಡಿಕೆ

ಬೆಂಗಳೂರು: ಜನತಾ ಜಲಧಾರೆ ಕಾರ್ಯಕ್ರಮದ ಮೂಲಕ 2023ರ ವಿಧಾನಸಭೆ ಚುನಾವಣೆಯ ಮಿಷನ್ 123 ಯುದ್ಧ ಆರಂಭವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ನೆಲಮಂಗಲ ಸಮೀಪದಲ್ಲಿ ನಾಳೆ ಹಮ್ಮಿಕೊಂಡಿರುವ ಜಲಧಾರೆ ಕಾರ್ಯಕ್ರಮದ ಪೂರ್ವ ಸಿದ್ದತೆ ವೀಕ್ಷಿಸಿ ನಂತರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಜಲಧಾರೆ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ವಿವಿಧ ವಿಚಾರಗಳ ಚರ್ಚೆ ಜೊತೆಗೆ ಹಲವು ನೀರಾವರಿ ವಿಚಾರಗಳಿಗೆ ಸಂಬಂಧಿಸಿದ ಕೈಪಿಡಿಯನ್ನು ಬಿಡುಗಡೆ ಮಾಡುತ್ತೇವೆ. ನಾವು ಸ್ವತಂತ್ರವಾಗಿ ಅಧಿಕಾರಕ್ಕೆ ತಮ್ಮ ಪಕ್ಷ ಬಂದರೆ ಕಳೆದ 75 ವರ್ಷಗಳ ಅನ್ಯಾಯವನ್ನು ಸರಿಪಡಿಸುವ ಪ್ರಯತ್ನವನ್ನು ಮಾಡುತ್ತೇವೆ ಎಂದು ಅವರು ಹೇಳಿದರು. ಹಲವಾರು ಇತಿಹಾಸ ಇರುವ ನದಿಗಳ ನೀರು ಬಳಕೆ ಮಾಡಿಕೊಂಡಿಲ್ಲ. ಎರಡೂ ರಾಷ್ಟ್ರೀಯ ಪಕ್ಷದಿಂದ ನದಿಗಳನ್ನು ಉಪಯೋಗ ಮಾಡಲು ಅವಕಾಶ ಮಾಡಿಕೊಟ್ಟಿಲ್ಲ. ಹೀಗಾಗಿ ಜಲಧಾರೆ ದೇಶದಲ್ಲೇ ಮೊದಲನೇ ದೊಡ್ಡ ಕಾರ್ಯಕ್ರಮ ಎಂದು ಕುಮಾರಸ್ವಾಮಿ ಹೇಳಿದರು.

ನನ್ನ ಹಾಗೂ ಪಕ್ಷದ ಸಂಕಲ್ಪಕ್ಕೆ ಗಂಗಾ ಮಾತೆಯ ಆಶೀರ್ವಾದ ಸಿಗಲಿ ಅಂತ ವಾರಣಾಸಿಯಲ್ಲಿ ಗಂಗಾರತಿ ಮಾಡುವ 25 ಜನರ ತಂಡವನ್ನು ಕರೆಸಿ ಅವರ ಮೂಲಕವೇ ಧಾರ್ಮಿಕ ವಿಧಿ ವಿಧಾನವನ್ನು ನೆರವೇರಿಸುವ ಮೂಲಕ ಚಾಲನೆ ನೀಡುತ್ತಿದ್ದೇವೆ. ಈ ಕಾರ್ಯಕ್ರಮದ ಮೂಲಕ ನಾವು ನಮ್ಮ ಅಸ್ತಿತ್ವವನ್ನು ತೋರಿಸುತ್ತೇವೆ ಎಂದು ಕುಮಾರಸ್ವಾಮಿ ಗುಡುಗಿದ್ದಾರೆ.

Edited By : Nagaraj Tulugeri
PublicNext

PublicNext

12/05/2022 10:27 pm

Cinque Terre

42.84 K

Cinque Terre

2