ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವರಿಷ್ಟರು ಸೂಚಿಸಿದ ಕ್ಷೇತ್ರದಿಂದ ಸ್ಪರ್ಧಿಸಲಿದ್ದೇನೆ: ವಿಜಯೇಂದ್ರ

ತುಮಕೂರು: ರಾಜ್ಯ ನಾಯಕರು ಸಮಯ ಸಂದರ್ಭ ನೋಡಿಕೊಂಡು ತೀರ್ಮಾನ ಕೈಗೊಳ್ಳಲಿದ್ದಾರೆ. ಪಕ್ಷ, ಪಕ್ಷದ ನಾಯಕರು ಯಾವುದೇ ಜವಾಬ್ದಾರಿ ಕೊಟ್ಟರು ನಿಭಾಯಿಸುತ್ತೇನೆ. ಮಂಡ್ಯದಲ್ಲಿ, ತುಮಕೂರು ಉಪ ಚುನಾವಣೆ ಸಂದರ್ಭದಲ್ಲಿ ಕೆಲಸ ಮಾಡಿದ್ದೇನೆ. ಚುನಾವಣೆಯಲ್ಲಿ ಗೆಲವು ಸಾಧಿಸೋದಕ್ಕೂ ದುಡಿದಿದ್ದೇನೆ ಎಂದು ಬಿಜೆಪಿ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಮುಂದಿನ ಚುನಾವಣೆಯಲ್ಲಿ ಗುಬ್ಬಿಯಿಂದ ಸ್ಪರ್ಧಿಸುತ್ತಾರಾ ಎನ್ನುವ ಬಗ್ಗೆ ಮಾತನಾಡಿ, ಆ ಬಗ್ಗೆ ಯಾವುದೇ ನಿರ್ಧಾರವನ್ನು ನಾನು ಮಾಡಿಲ್ಲ. ಪಕ್ಷದ ವರಿಷ್ಠರು, ನಾಯಕರು ಯಾವ ಕ್ರಮ ಕೈಗೊಳ್ಳಲಿದ್ದಾರೋ ಆ ಬಗ್ಗೆ ನನ್ನ ಸಂಪೂರ್ಣ ನಿಲುವು ಬದ್ಧವಾಗಿದೆ ಎಂದು ಹೇಳಿದರು.

ಕಾಂಗ್ರೆಸ್ ನವರು ಬಹಳ ದಡ್ಡರಿದ್ದಾರೆ. ಯಾವಾಗ ಚುನಾವಣೆ, ಅಧಿಕಾರಕ್ಕೆ ಬರುತ್ತೇವೆ ಎನ್ನುವ ಹಗಲು ಕನಸು ಕಾಣುತ್ತಿದ್ದಾರೆ. ಅವರ ಕನಸು ನನಸಾಗೋದಿಲ್ಲ. ಪ್ರಧಾನಿ ಮೋದಿ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಮುಂದಿನ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ಹೇಳಿದರು.

Edited By : Nagaraj Tulugeri
PublicNext

PublicNext

12/05/2022 10:50 pm

Cinque Terre

47.47 K

Cinque Terre

2

ಸಂಬಂಧಿತ ಸುದ್ದಿ