ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ವಿರುದ್ಧ ಮಾಜಿ ಸಂಸದೆ ರಮ್ಯಾ ನಡೆಸಿದ್ದ ಟೀಕಾಪ್ರಹಾರಕ್ಕೆ ಯುವ ಕಾಂಗ್ರೆಸ್ ಅಧ್ಯಕ್ಷ ನಲಪಾಡ್ ಗರಂ ಆಗಿದ್ದರು.ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದ ಮೊಹಮ್ಮದ್ ನಲಪಾಡ್ ಮೇಲಿರುವ ಆರೋಪದ ಸುದ್ದಿಗಳ ಫೋಟೋಗಳನ್ನು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಶೇರ್ ಮಾಡಿರುವ ರಮ್ಯಾ, ನಲಪಾಡ್ ವಿರುದ್ಧ ಹರಿಹಾಯ್ದಿದ್ದಾರೆ.
ಪ್ರಕರಣವೊಂದರ ಬೇಲ್ ಮೇಲೆ ಹೊರಗಿರುವ ನಲಪಾಡ್ ನನ್ನ ಪ್ರಾಮಾಣಿಕತೆಯನ್ನೇ ಪ್ರಶ್ನಿಸುತ್ತಿದ್ದಾರೆ ಎಂದು ನಟಿ ರಮ್ಯಾ ಕುಟುಕಿದ್ದಾರೆ.ಸಚಿವ ಡಾ. ಸಿ.ಎನ್.ಅಶ್ವಥ್ ನಾರಾಯಣ್ ಅವರನ್ನು ಶಾಸಕ ಎಂ.ಬಿ.ಪಾಟೀಲ್ ಗೌಪ್ಯವಾಗಿ ಭೇಟಿಯಾಗಿದ್ದಾರೆ ಎಂದು ಡಿ.ಕೆ.ಶಿವಕುಮಾರ್ ಹೇಳಿಕೆ ನೀಡಿದ್ದರು. ಇದಕ್ಕೆ ರಮ್ಯಾ ಅವರು ಆಕ್ಷೇಪ ವ್ಯಕ್ತಪಡಿಸಿದ್ದರು.
ಭೇಟಿಯಲ್ಲಿ ಸಮಸ್ಯೆ ಏನಿದೆ ಎಂದು ಪ್ರಶ್ನಿಸಿದ್ದರು. ಇದಕ್ಕೆ ಪ್ರತಿಯಾಗಿ ರಮ್ಯಾ ವಿರುದ್ಧ ನಲಪಾಡ್ ಹರಿಹಾಯ್ದಿದ್ದರು. ರಮ್ಯಾ ಇಷ್ಟು ದಿನ ಎಲ್ಲಿದ್ದರೂ ಅಂತ ನನಗೂ ಗೊತ್ತಿಲ್ಲ. ಇಷ್ಟು ತಿಂಗಳು ಇಷ್ಟು ವರ್ಷ ರಮ್ಯಾ ಎಲ್ಲಿದ್ದರು? ಎಲ್ಲಿಯೂ ಇಲ್ಲದ ರಮ್ಯಾ ಹಠಾತ್ ಯಾಕೆ ಬಂದರು? ಯಾವ ಕುರ್ಚಿಯ ಮೇಲೆ ಟವಲ್ ಹಾಕಲು ರಮ್ಯಾ ಬಂದಿದ್ದಾರೆ ಎಂದು ಮೊಹಮ್ಮದ್ ನಲಪಾಡ್ ಉಡುಪಿಯಲ್ಲಿ ಟಾಂಗ್ ಕೊಟ್ಟಿದ್ದರು.
PublicNext
13/05/2022 01:11 pm