ಹೊಸಪೇಟೆ: ವಿಧಾನ ಪರಿಷತ್ ಚುನಾವಣೆಗೆ ನನ್ನ ಮತ್ತು ವಿಜಯೇಂದ್ರ ಸೇರಿದಂತೆ 20 ಹೆಸರುಗಳನ್ನು ರಾಜ್ಯ ಬಿಜೆಪಿ ಘಟಕವು ಪಕ್ಷದ ಹೈಕಮಾಂಡ್ ಶಿಫಾರಸು ಮಾಡಿದೆ ಎಂದು ಬಿಜೆಪಿ ಮುಖಂಡ ಲಕ್ಷ್ಮಣ ಸವದಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಸವದಿ, ವಿಧಾನ ಪರಿಷತ್ ಚುನಾವಣೆಗೆ ನನ್ನ ಮತ್ತು ವಿಜಯೇಂದ್ರ ಸೇರಿದಂತೆ 20 ಹೆಸರುಗಳನ್ನು ರಾಜ್ಯ ಬಿಜೆಪಿ ಘಟಕವು ಪಕ್ಷದ ಹೈಕಮಾಂಡ್ ಶಿಫಾರಸು ಮಾಡಿದ್ದು, ಹೈಕಮಾಂಡ್ ನಿರ್ಧಾರಕ್ಕೆ ನಾವು ಬದ್ಧರಾಗಿದ್ದೇವೆ ಎಂದು ತಿಳಿಸಿದ್ದಾರೆ.
ವಿಧಾನ ಪರಿಷತ್ ಚುನಾವಣೆಯಲ್ಲಿ ಯಾರನ್ನೂ ಕಣಕ್ಕಿಳಿಸಬೇಕು ಎಂಬುದರ ಬಗ್ಗೆ ರಾಷ್ಟ್ರೀಯ ನಾಯಕರು ಕೂಲಂಕಷವಾಗಿ ಪರಿಶೀಲಿಸಿದ ನಂತರ ತೀರ್ಮಾನಕ್ಕೆ ಬರುತ್ತಾರೆ. ನಾವು ಪಕ್ಷದ ಶಿಸ್ತಿನ ಕಾರ್ಯಕರ್ತರಾಗಿದ್ದು, ಹೈಕಮಾಂಡ್ ನಿರ್ಧಾರಕ್ಕೆ ಬದ್ಧರಾಗಿರುತ್ತೇವೆ ಎಂದರು.
PublicNext
16/05/2022 10:19 am