ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ

ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಇಂದು ಬಸವರಾಜ ಹೊರಟ್ಟಿ ರಾಜೀನಾಮೆ ನೀಡಿದ್ಧಾರೆ. ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿ ನಡೆಸಿ ರಾಜೀನಾಮೆ ನೀಡಿದ ಹೊರಟ್ಟಿ ಮಂಗಳವಾರ ಬಿಜೆಪಿಗೆ ಸೇರ್ಪಡೆಯಾಗುವುದಾಗಿ ತಿಳಿಸಿದರು.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಧಾನ ಪರಿಷತ್ ಸಚಿವಾಲಯದ ಆಡಳಿತದಲ್ಲಿ ಪ್ರಾಮಾಣಿಕ ಪಾರದರ್ಶಕತೆಗೆ ಆದ್ಯತೆ ನೀಡಿದ್ದೇನೆ. ಕಲುಷಿತವಾದ ರಾಜಕಾರಣದಲ್ಲಿ ನಮ್ಮಂತವರಿಗೆ ನೋವು ಆಗಿದೆ. ಆದರೆ ಮನಸ್ಸು ಇಲ್ಲದೆ ಇದ್ದರೂ ರಾಜಕೀಯದಲ್ಲಿ ಇರಬೇಕಾಗುತ್ತೆ ಎಂದರು.

ಬಿಜೆಪಿ ಸೇರ್ಪಡೆ ಸಂಬಂಧಿಸಿದಂತೆ ಯಾವುದೇ ಷರತ್ತು ಹಾಕಿಲ್ಲ. ಕೇಂದ್ರ ಸಚಿವ ಅಮಿತ್ ಶಾ ಭೇಟಿ ಸಂದರ್ಭದಲ್ಲಿ ಯಾವುದೇ ಚರ್ಚೆ ಆಗಿಲ್ಲ ಎಂದು ಸ್ಪಷ್ಟಪಡಿಸಿದರು. 1980ರಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ ರಾಜಕೀಯ ಪ್ರವೇಶ ಮಾಡಿದೆ. 1986 ಜನತಾದಳ, ಲೋಕ ಶಕ್ತಿಯಲ್ಲಿ ಇದ್ದೆ. 2000ದಿಂದ ಇಲ್ಲಿಯವರೆಗೆ ಜೆಡಿಎಸ್ ನಲ್ಲಿ ಇದ್ದೆ. ಜೆಡಿಎಸ್ ನಲ್ಲಿ ಕುಟುಂಬ ಸದಸ್ಯರ ತರ ನೋಡಿಕೊಂಡರು ಎಂದರು.

ಭಾರತದಲ್ಲಿ ಮಾಜಿ ಪ್ರಧಾನಿ ಎಚ್ಡಿ ದೇವೇಗೌಡರು ಪ್ರಬುದ್ಧ ರಾಜಕಾರಣಿ. ಅವರಿಗೂ ಕೃತಜ್ಞತೆ ಸಲ್ಲಿಸುತ್ತೇನೆ ಎಂದ ಅವರು, ಜೆಡಿಎಸ್ ತೊರೆಯುವ ನಿರ್ಧಾರಕ್ಕೆ ಏನು ಕಾರಣ ಎಂಬ ಪ್ರಶ್ನೆಗೆ, ಆತ್ಮೀಯರು ಸಾಕಷ್ಟು ಒತ್ತಾಯ ಮಾಡಿದರು, ಆಕಸ್ಮಿಕವಾಗಿ ಕೆಲವು ಬದಲಾವಣೆ ಅಗತ್ಯ ಎಂದು ಹೇಳಿದರು.

Edited By : Nirmala Aralikatti
PublicNext

PublicNext

16/05/2022 04:25 pm

Cinque Terre

37.09 K

Cinque Terre

2

ಸಂಬಂಧಿತ ಸುದ್ದಿ