ಬೆಂಗಳೂರು : ನಿನ್ನೆತಾನೇ ವಿಧಾನಪರಿಷತ್ ಸಭಾಪತಿಯಾಗಿದ್ದ ಬಸವರಾಜ ಹೊರಟ್ಟಿಯವರು ತಮ್ಮ ಸ್ಥಾನಕ್ಕೆ ಹಾಗೂ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು, ಇದೀಗ ಅವರ ರಾಜೀನಾಮೆ ಬಳಿಕ ಅದೇ ಸ್ಥಾನಕ್ಕೆ ಪರಿಷತ್ ಸದಸ್ಯ ರಘುನಾಥ ರಾವ್ ಮಲಕಾಪೂರೆ ಅವರನ್ನು ಆಯ್ಕೆ ಮಾಡಲಾಗಿದೆ.
ವಿಧಾನ ಪರಿಷತ್ ಸಭಾಪತಿಯಾಗಿದ್ದ ಬಸವರಾಜ ಹೊರಟ್ಟಿಯವರು ಜೆಡಿಎಸ್ ತೊರೆದು ಬಿಜೆಪಿ ಸೇರಿ ಇತ್ತ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು, ಅವರಿಂದ ತೆರವಾಗಿ ಖಾಲಿ ಉಳಿದ ಉಪಸಭಾಪತಿ ಸ್ಥಾನಕ್ಕೆ ಹಂಗಾಮಿಯಾಗಿ ರಘುನಾಥ್ ರಾವ್ ಮಲಕಾಪೂರೆ ಅವರನ್ನು ಆಯ್ಕೆ ಮಾಡಲಾಗಿದೆ.
ಅಂದರಂತೆ ಇಂದು ವಿಧಾನಸೌಧದಲ್ಲಿ ನಡೆದಂತಹ ಸರಳ ಸಮಾರಂಭದಲ್ಲಿ ನೂತನ ಪರಿಷತ್ ಸಭಾಪತಿಯಾಗಿ ರಘುನಾಥ ರಾವ್ ಮಲಕಾಪೂರೆ ಅವರು ಅಧಿಕಾರ ಕೂಡ ಸ್ವೀಕರಿಸಿದ್ದಾರೆ.
PublicNext
17/05/2022 04:48 pm