ಗಾಂಧಿನಗರ: ಗುಜರಾತ್ ಪ್ರಭಾವಿ ಸಮುದಾಯದ ಯುವ ನಾಯಕ ಹಾರ್ದಿಕ್ ಪಟೇಲ್ ಕಾಂಗ್ರೆಸ್ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು ಪಕ್ಷ ತೊರೆದಿದ್ದಾರೆ.
ವಿಧಾನಸಭೆ ಚುನಾವಣೆಗೆ ಸಜ್ಜಾಗುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ ಹಾರ್ದಿಕ್ ಪಟೇಲ್ ರಾಜೀನಾಮೆ ನೀಡಿದ್ದು ಗುಜರಾತ್ ರಾಜ್ಯದಲ್ಲಿ ಭಾರಿ ಆಘಾತ ಉಂಟು ಮಾಡಿದೆ. ದೇಶದ ಹಳೆಯ ರಾಜಕೀಯ ಪಕ್ಷ ಕಾಂಗ್ರೆಸ್ನಲ್ಲಿ ಆಂತರಿಕ ಕಲಹ ಬೂದಿ ಮುಚ್ಚಿದ ಕೆಂಡದಂತಿದೆ. ಪಕ್ಷದ ಹಲವು ರಾಜ್ಯ ಘಟಕಗಳಲ್ಲಿ ಹಿರಿಕಿರಿಯರ ನಡುವೆ ಹೊಂದಾಣಿಕೆ ಕೊರತೆ ಕಂಡುಬರುತ್ತಿದೆ. ಹಿರಿಯರ ವರ್ತನೆಯಿಂದ ಕಿರಿಯರು ಮತ್ತು ಅನೇಕ ಸಂದರ್ಭಗಳಲ್ಲಿ 'ಕೈ' ಹಿಡಿದಿದ್ದ ಯುವ ನಾಯಕರು ಅತೃಪ್ತರಾಗಿದ್ದಾರೆ. ಇದೇ ಕಾರಣಕ್ಕೆ ಈಗ ಹಾರ್ದಿಕ್ ಪಟೇಲ್ ಕಾಂಗ್ರೆಸ್ ತೊರೆದಿದ್ದಾರೆ.
28 ವರ್ಷದ ಹಾರ್ದಿಕ್ 2015ರಲ್ಲಿ ಗುಜರಾತ್ನಲ್ಲಿ ಪಟೇಲ್ ಸಮುದಾಯದ ಮೀಸಲಾತಿ ಚಳವಳಿ ಮುನ್ನಡೆಸುವ ಮೂಲಕ ಮುನ್ನೆಲೆಗೆ ಬಂದಿದ್ದರು. ನಂತರ 2019ರಲ್ಲಿ ರಾಹುಲ್ ಗಾಂಧಿ ಸಮ್ಮುಖದಲ್ಲಿ ಕಾಂಗ್ರೆಸ್ ಸೇರಿದ್ದರು.
PublicNext
18/05/2022 03:02 pm