ಬೆಂಗಳೂರು: ನಾನು ಮತ್ತೆ ಸಿಎಂ ಆದರೆ ದಲಿತರ ಸಾಲ ಮನ್ನಾ ಮಾಡುತ್ತೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಬೆಂಗಳೂರಿನ ವಸಂತ್ ನಗರದ ಅಂಬೇಡ್ಕರ್ ಭವನದಲ್ಲಿ ಡಾ.ಅಂಬೇಡ್ಕರ್ ಜಯಂತಿ ಅಂಗವಾಗಿಯೇ
ಆಯೋಜಿಸಿದ್ದ ಶೋಷಿತರ ಸ್ವಾಭಿಮಾನ ಸಮಾವೇಶ ಉದ್ಘಾಟಿಸಿ ಸಿದ್ದರಾಮಯ್ಯ ಮಾತನಾಡಿದರು.
ನಾನು ಮುಖ್ಯಮಂತ್ರಿ ಆಗಿದ್ದಾಗ, ಶೋಷಿತರ ಒಳಿತಿಗಾಗಿಯೇ, ಅಭಿವೃದ್ದಿಯ ಅನುದಾನವನ್ನ 50 ಲಕ್ಷದಿಂದ 1 ಕೋಟಿ ವರೆಗೂ ಹೆಚ್ಚಳ ಮಾಡುವಂತೆ ಘೋಷಿಸಿದ್ದೆ ಅಂತಲೇ ಸಿದ್ಧರಾಮಯ್ಯ ವಿವರಿಸಿದ್ದಾರೆ.
PublicNext
19/05/2022 07:29 am