ಜೈಪುರ: ಕುಟುಂಬ ರಾಜಕೀಯವು ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಪರೋಕ್ಷವಾಗಿ ಕಾಂಗ್ರೆಸ್ ಪಕ್ಷದ ಕುರಿತು ಮಾತನಾಡಿರುವ ಅವರು ಕುಟುಂಬ ರಾಜಕಾರಣದಿಂದ ದೇಶ ಮತ್ತಷ್ಟು ಹಿಂದಕ್ಕೆ ಹೋಗುತ್ತದೆ. ಕುಟುಂಬ ರಾಜಕಾರಣ ಮಾಡುವವರ ಜೀವನ ಕುಟುಂಬದಿಂದಲೇ ಆರಂಭವಾಗಿ ಕುಟುಂಬದಿಂದಲೇ ಅಂತ್ಯವಾಗುತ್ತದೆ ಎಂದು ಪ್ರಧಾನಿ ಅಭಿಪ್ರಾಯ ಪಟ್ಟಿದ್ದಾರೆ.
ಬಿಜೆಪಿಯ ರಾಷ್ಟ್ರೀಯ ಪದಾಧಿಕಾರಿಗಳನ್ನು ಉದ್ದೇಶಿಸಿ ವರ್ಚ್ಯುಯಲ್ ಸಭೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, 40 ನಿಮಿಷಗಳ ಕಾಲ ಭಾಷಣ ಮಾಡಿದರು. ಬಿಜೆಪಿ ಕಾರ್ಯಕರ್ತರು ಹೊಸ ಸದಸ್ಯರನ್ನು ಪಕ್ಷಕ್ಕೆ ಸೇರ್ಪಡೆ ಮಾಡಬೇಕು, ಹೊಸ ಸದಸ್ಯರ ಕುಟುಂಬ ವರ್ಗ ಈ ಹಿಂದೆ ರಾಜಕಾರಣದಲ್ಲಿ ಇರಬಾರದು. ರಾಜಕೀಯ ಕೌಟುಂಬಿಕ ಹಿನ್ನೆಲೆ ಇಲ್ಲದ ಯುವಕರು ಹೊಸದಾಗಿ ರಾಜಕೀಯಕ್ಕೆ ಬರಬೇಕು ಎಂದು ಪ್ರಧಾನಿ ಮೋದಿ ಕರೆ ನೀಡಿದರು.
PublicNext
20/05/2022 07:05 pm