ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನವದೆಹಲಿ: ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ಆಗಿಲ್ಲ:ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ

ನವದೆಹಲಿ:ಸಂಪುಟ ವಿಸ್ತರಣೆ ಬಗ್ಗೆ ಪಕ್ಷದ ವರಿಷ್ಠರ ಜತೆ ಚರ್ಚೆಯಾಗಿಲ್ಲ. ಸುಪ್ರೀಂ ಕೋರ್ಟ್ ಬಿಬಿಎಂಪಿ ಹಾಗೂ ಇತರೆ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ಸೂಚಿಸಿರುವ ಹಿನ್ನೆಲೆಯಲ್ಲಿ ಅದರ ಬಗ್ಗೆ ಚರ್ಚೆ ಮಾಡಲಾಗಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಅವರು ಇಂದು ನವದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು.

ಅಮಿತ್ ಶಾ ಅವರ ಸೂಚನೆಯಂತೆ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರೊಂದಿಗೆ ಮಾತನಾಡಿ ಕರ್ನಾಟಕ ವಿಧಾನ ಪರಿಷತ್ ಹಾಗೂ ರಾಜ್ಯ ಸಭಾ ಚುನಾವಣೆಗೆ ಕಳುಹಿಸಲಾಗಿರುವ ಪಟ್ಟಿಯ ಬಗ್ಗೆ ವಿವರಗಳನ್ನು ನೀಡಲಾಗಿದೆ.

ನಾಲ್ಕು ವಿಧಾನ ಪರಿಷತ್ ಸ್ಥಾನಗಳಿಗೆ 24 ಕಡೇ ದಿನಾಂಕ ವಾಗಿದ್ದು. ತುರ್ತಾಗಿ ನಿರ್ಣಯಗಳನ್ನು ಕೈಗೊಳ್ಳಬೇಕಿದೆ. ರಾಜ್ಯ ಸಭೆ ಚುನಾವಣೆಗೆ 31 ರವರೆಗೆ ಸಮಯಾವಕಾಶವಿದೆ. ಕೋರ್ ಕಮಿಟಿ ಚರ್ಚೆಯ ನಿರ್ಣಯಗಳ ಬಗ್ಗೆ ಅರುಣ್ ಸಿಂಗ್ ಅವರಿಗೆ ತಿಳಿಸಲಾಗಿದೆ.ಆದಷ್ಟು ಬೇಗನೆ ತೀರ್ಮಾನ ತೆಗೆದುಕೊಳ್ಳುವುದಾಗಿ ಹೇಳಿದ್ದಾರೆ ಎಂದರು.

Edited By :
PublicNext

PublicNext

21/05/2022 01:58 pm

Cinque Terre

49.4 K

Cinque Terre

0

ಸಂಬಂಧಿತ ಸುದ್ದಿ