ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವಿಶ್ವ ಆರ್ಥಿಕ ಶೃಂಗ ಸಭೆಯಲ್ಲಿ ಭಾಗವಹಿಸಲು ಸಿಎಂ ದಾವೋಸ್‌ಗೆ ಪಯಣ

ಬೆಂಗಳೂರು: ಧಾವೋಸ್‌ನಲ್ಲಿ ನಡೆಯಲಿರುವ ವಿಶ್ವ ಆರ್ಥಿಕ ಶೃಂಗ ಸಭೆಯಲ್ಲಿ ಮೂರು ದಿನಗಳ ಕಾಲ ಮುಖ್ಯ ಸಭೆಯಲ್ಲಿ ಭಾಗವಹಿಸುತ್ತಿದ್ದೇನೆ.ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ತಮ್ಮ ಮೂರು ದಿನಗಳ ದಾವೋಸ್ ಪ್ರವಾಸದ ಕುರಿತು ವರದಿಗಾರರಿಗೆ ಮಾಹಿತಿ ನೀಡಿದ ಅವರು, ಪರಿಸರ ಮತ್ತು ಆರ್ಥಿಕತೆ ಕುರಿತು ಎರಡು ಅಧಿವೇಶಗಳಲ್ಲಿ ಭಾಗವಹಿಸುತ್ತಿರುವುದಾಗಿ ತಿಳಿಸಿದರು. ಕರ್ನಾಟಕ ಪೆವಿಲಿಯನ್ ಸ್ಥಾಪಿಸಲಾಗಿದೆ.

ಐ.ಟಿ ಬಿಟಿ ಸಚಿವರು, ಕೈಗಾರಿಕಾ ಸಚಿವರು ಹಾಗೂ ಹಿರಿಯ ಅಧಿಕಾರಿಗಳು ಶೃಂಗ ಸಭೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ ಎಂದರು.

ದಾವೋಸ್‌ನಲ್ಲಿ ನಡೆಯಲಿರುವ ವಿಶ್ವ ಆರ್ಥಿಕ ಶೃಂಗ ಸಭೆಯಲ್ಲಿ 18 ವಿವಿಧ ದೇಶಗಳ ಉದ್ಯೋಗ ತಜ್ಞರೊಂದಿಗೆ ಮಾತುಕತೆ ನಡೆಸಲು ಸಮಯ ನಿಗದಿಯಾಗಿದೆ. ನವೆಂಬರ್‌ನಲ್ಲಿ ಬೆಂಗಳೂರಿನಲ್ಲಿ ಇನ್ವೆಸ್ಟ್ ಕರ್ನಾಟಕ ಕಾರ್ಯಕ್ರಮ ನಡೆಯಲಿರುವುದರಿಂದ ಮಾತುಕತೆ ಉಪಯುಕ್ತವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

Edited By : Shivu K
PublicNext

PublicNext

22/05/2022 08:31 am

Cinque Terre

123.98 K

Cinque Terre

2

ಸಂಬಂಧಿತ ಸುದ್ದಿ