ಬೆಂಗಳೂರು: ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಅವರು ದಲಿತ ಸ್ವಾಮೀಜಿಯೊಬ್ಬರ ಬಾಯಿಂದ ಎಂಜಲು ಅನ್ನ ಪಡೆದು ಸೇವಿಸುವ ಮೂಲಕ ಮತ್ತೆ ಸುದ್ದಿಯಾಗಿದ್ದಾರೆ.
ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಹಮ್ಮಿಕೊಂಡಿದ್ದ ಬಿ.ಆರ್ ಅಂಬೇಡ್ಕರ್ ಜಯಂತಿ ಮತ್ತು ಈದ್ ಮಿಲನ್ ಕಾರ್ಯಕ್ರಮದಲ್ಲಿ ಈ ಘಟನೆ ನಡೆದಿದೆ. ಉತ್ತರ ಪ್ರದೇಶದಲ್ಲಿ ದಲಿತರಿಗೆ ದೇವಾಲಯ ಪ್ರವೇಶ ನಿರಾಕರಿಸಿರುವ ಹಾಗೂ ಊಟ ಹಾಕದೆ ಅವಮಾನಿಸಿರುವ ಘಟನೆಯನ್ನು ಖಂಡಿಸಿದ ಜಮೀರ್ ಅಹಮದ್ ದಲಿತ ಮಠದ ಮಠಾಧೀಶರಾದ ಶ್ರೀ ನಾರಾಯಣ ಸ್ವಾಮೀಜಿ ಅವರ ಎಂಜಲು ಅನ್ನ ಸೇವಿಸುವ ಮೂಲಕ ಉತ್ತರ ಪ್ರದೇಶ ಘಟನೆಯನ್ನು ವಿರೋಧಿಸಿದ್ದಾರೆ.
ಈ ವೇಳೆ ಮಾತನಾಡಿದ ಜಮೀರ್ ಅಹ್ಮದ್ ಖಾನ್ ಅವರು, ಜಾತಿ, ಧರ್ಮಗಳಿಗೆ ಮಿಗಿಲಾದದ್ದು ಮಾನವೀಯತೆ. ನಮ್ಮೆಲ್ಲರ ಜಾತಿ ಒಂದೇ ಅದುವೇ ಮನುಷ್ಯ ಜಾತಿ. ಮನುಷ್ಯರಾಗಿ ಬಾಳುವುದೇ ನಿಜವಾದ ಧರ್ಮ. ಮನುಷ್ಯ ಸಂಬಂಧಗಳಿಗೆ ಜಾತಿ, ಧರ್ಮ ಎಂದಿಗೂ ಅಡ್ಡಿಯಾಗದು. ನಾವೆಲ್ಲರೂ ಸಹೋದರರಂತೆ ಬಾಳಬೇಕು. ಸ್ವಾಮೀಜಿ ಬಾಯಲ್ಲಿದ್ದ ಅನ್ನ ತಿಂದ ನಾನು ಸತ್ತು ಹೋದೆನಾ ಎಂದು ಹೇಳಿ ಟೇಬಲ್ ಕುಟ್ಟಿದರು. ಈಗ ಈ ವಿಡಿಯೋ ಸಖತ್ ವೈರಲ್ ಆಗಿದೆ.
PublicNext
22/05/2022 06:43 pm