ಬೆಂಗಳೂರು: ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಹುರಿಯಾಳುಗಳ ಪಟ್ಟಿಯನ್ನು ಹೈಕಮಾಂಡ್‌ಗೆ ಶಿಫಾರಸು ಮಾಡಬೇಕಿದೆ. ಈ ವಿಚಾರದದಲ್ಲಿ ನನ್ನ ಹಾಗೂ ಸಿದ್ದರಾಮಯ್ಯ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೇಲ್ಮನೆಯ ಏಳು ಸ್ಥಾನಗಳ ಚುನಾವಣೆಗೆ ನಾಮಪತ್ರ ಸಲ್ಲಿಸಲು ಮೇ 24 ಕೊನೆಯ ದಿನವಾಗಿದೆ. ಶೀಘ್ರದಲ್ಲಿ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಿ ಹೈಕಮಾಂಡ್‌ಗೆ ಸಲ್ಲಿಸಲಿದ್ದೇವೆ. ನಮ್ಮ ಅಭಿಪ್ರಾಯವನ್ನು ಹೈಕಮಾಂಡ್ ಮುಂದೆ ಹಂಚಿಕೊಳ್ಳುವ ಸಂಪ್ರದಾಯ ನಮ್ಮ ಪಕ್ಷದಲ್ಲಿದೆ. ಸುಮಾರು 100 ಆಕಾಂಕ್ಷಿಗಳಿದ್ದಾರೆ. ಕೆಲವರು ಮನವಿ ಸಲ್ಲಿಸಿಲ್ಲ ಆದರೆ, ಬೇಕಾದ ಅರ್ಹತೆ ಹೊಂದಿದ್ದಾರೆ. ಎಲ್ಲರನ್ನೂ ಪರಿಗಣಿಸಿ ಶಿಫಾರಸ್ಸು ಮಾಡಲಾಗುವುದು, ಹೈಕಮಾಂಡ್ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಹೇಳಿದರು. ರಾಜ್ಯ ಘಟಕ ಹೆಸರನ್ನು ಮಾತ್ರ ಶಿಫಾರಸು ಮಾಡಲಿದೆ ಆದರೆ, ಯಾರಿಗೆ ಟಿಕೆಟ್ ನೀಡಬೇಕು ಎಂಬ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಿಲ್ಲ ಎಂದರು.
PublicNext
23/05/2022 11:12 am