ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧರ್ಮದ ಹೆಸರಲ್ಲಿ ದ್ವೇಷ ಬಿತ್ತಲಾಗುತ್ತಿದೆ: ಬೃಂದಾ ಕಾರಟ್

ಶಹಾಪುರ: ಧರ್ಮದ ಹೆಸರಲ್ಲಿ ಜನರ ನಡುವೆ ದ್ವೇಷ ಬಿತ್ತಲಾಗುತ್ತಿದೆ. ದೇಶ ಮತ್ತು ರಾಜ್ಯದಲ್ಲಿ ಬೆಲೆ ಏರಿಕೆಯಾಗುತ್ತಿದೆ. ನಿರುದ್ಯೋಗ ಸಮಸ್ಯೆ ಹೆಚ್ಚಾಗಿದೆ. ಈ ಎಲ್ಲ ಸಮಸ್ಯೆಗಳಿಂದ ಜನರ ಗಮನ ಬದಿಗಿರಿಸಲು ಧರ್ಮ ಸಂಘರ್ಷಗಳನ್ನು ಸೃಷ್ಟಿಸಲಾಗುತ್ತಿದೆ ಎಂದು ಸಿಪಿಎಂ ಪಾಲಿಟ್ ಬ್ಯೂರೋ ಸದಸ್ಯೆ ಬೃಂದಾ ಕಾರಟ್ ಆತಂಕ ವ್ಯಕ್ತಪಡಿಸಿದ್ದಾರೆ.

ಶಹಾಪುರದಲ್ಲಿ ಹಮ್ಮಿಕೊಂಡಿದ್ದ ಶಾಲಾ ಮೈದಾನದಲ್ಲಿ ಭಾನುವಾರ ಮಹಿಳಾ ಕೃಷಿ-ಕೂಲಿಕಾರರ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು ದೇಶದಲ್ಲಿ ತಳ ಸಮುದಾಯದವರ ಮೇಲೆ ನಿರಂತರ ದಬ್ಬಾಳಿಕೆಗಳು ನಡೆಯುತ್ತಿವೆ. ಧರ್ಮದ ಬಗ್ಗೆ ಮಾತನಾಡುವವರು ಇಲ್ಲಿನ ಜಾತಿ ವ್ಯವಸ್ಥೆ ಬಗ್ಗೆ ಮಾತನಾಡುತ್ತಿಲ್ಲ‌. ಎಷ್ಟೇ ದೌರ್ಜನ್ಯಗಳು ನಡೆದರೂ ಧರ್ಮವೇ ಮುಖ್ಯ ಎಂಬಂತೆ ಬಿಂಬಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

Edited By : Nagaraj Tulugeri
PublicNext

PublicNext

23/05/2022 02:25 pm

Cinque Terre

26.66 K

Cinque Terre

7