ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಂಜೆಯೊಳಗಾಗಿ ಪರಿಷತ್ ಚುನಾವಣೆ ಅಭ್ಯರ್ಥಿಗಳ ಪಟ್ಟಿ ಪ್ರಕಟ: ಡಿಕೆಶಿ

ನವದೆಹಲಿ: ನಾಳೆ ಪರಿಷತ್ ಚುನಾವಣೆಗೆ ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಟಿಕೆಟ್ ಗಾಗಿ ಪೈಪೋಟಿ ನಡೆದು, ಗೊಂದಲ ಕೂಡ ಉಂಟಾಗಿದೆ ಎನ್ನಲಾಗಿತ್ತು. ಆದ್ರೆ ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ. ಇಂದು ಸಂಜೆ ಪರಿಷತ್ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.

ದೆಹಲಿಯಲ್ಲಿ ಇಂದು ಈ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪರಿಷತ್ ಚುನಾವಣೆಯ ಅಭ್ಯರ್ಥಿಗಳಿಗೆ ಟಿಕೆಟ್ ಕೊಡುವ ಸಂಬಂಧ ಯಾವುದೇ ಗೊಂದಲವಿಲ್ಲ. ಇಂದು ಸಂಜೆ 4 ಅಥವಾ 5 ಗಂಟೆಗೆ ಪಟ್ಟಿ ಪ್ರಕಟಿಸೋದಾಗಿ ಹೇಳಿದರು. ರಾಜ್ಯಸಭೆ ಚುನಾವಣೆ ಸಂಬಂಧ ಸ್ಪರ್ಧೆ ವಿಚಾರವಾಗಿ ಮಾತನಾಡಿದ ಅವರು, ಆ ಬಗ್ಗೆ ಹೈಕಮಾಂಡ್ ಜೊತೆಗೆ ಯಾವುದೇ ಚರ್ಚೆ ನಡೆದಿಲ್ಲ ಎಂಬುದಾಗಿ ತಿಳಿಸಿದರು.

Edited By : Nagaraj Tulugeri
PublicNext

PublicNext

23/05/2022 04:58 pm

Cinque Terre

47.28 K

Cinque Terre

3

ಸಂಬಂಧಿತ ಸುದ್ದಿ