ಬೆಂಗಳೂರು: ವಿಧಾನ ಪರಿಷತ್ ಟಿಕೆಟ್ ಆಕಾಂಕ್ಷಿಯಾಗಿದ್ದ ಮಾಜಿ ಸಿಎಂ ಯಡಿಯೂರಪ್ಪನವರ ಪುತ್ರ ಬಿ.ವೈ. ವಿಜಯೇಂದ್ರ ಅವರಿಗೆ ಜಿಜೆಪಿ ಹೈಕಮಾಂಡ್ ಬಿಗ್ ಶಾಕ್ ಕೊಟ್ಟಿದೆ.ಹೌದು ವಿಧಾನ ಪರಿಷತ್ ಚುನಾವಣೆಗೆ ರಾಜ್ಯ ಕೋರ್ ಕಮಿಟಿಯಿಂದ ವಿಜಯೇಂದ್ರ ಹೆಸರು ಶಿಫಾರಸು ಮಾಡಲಾಗಿತ್ತು.
ಒಂದು ಹಂತಕ್ಕೆ ಇವರಿಗೆ ಟಿಕೆಟ್ ಫಿಕ್ಸ್ ಎನ್ನುವಂತ್ತಾದ ಸಂದರ್ಭದಲ್ಲಿ ಹೈಕಮಾಂಡ್ ವಿಜಯೇಂದ್ರನ ಆಸೆಗೆ ತಣ್ಣಿರೆರಚಿದೆ. ವಿಜಯೇಂದ್ರಗೆ ಟಿಕೆಟ್ ನೀಡಿದರೆ ಕುಟುಂಬ ರಾಜಕಾರಣಕ್ಕೆ ಆದ್ಯತೆ ನೀಡಿದಂತಾಗಲಿದೆ. ಇದನ್ನೇ ಕಾಂಗ್ರೆಸ್ ಅಸ್ತ್ರವನ್ನಾಗಿ ಬಳಸಿಕೊಳ್ಳಲಿದೆ ಎಂದು ಕೆಲವರಿಂದ ಅಭಿಪ್ರಾಯ ವ್ಯಕ್ತವಾಗಿದೆ. ಬೇಕಾದರೆ ಮುಂದಿನ ವಿಧಾನಸಭೆಗೆ ಟಿಕೆಟ್ ಕೊಡೋಣ ಪಕ್ಷಕ್ಕೆ ಲಾಭವಾಗಲಿದೆ ಎಂಬ ಮಾತುಗಳು ಕೇಳಿಬಂದ ಹಿನ್ನೆಲೆಯಲ್ಲಿ ವಿಜಯೇಂದ್ರಗೆ ಟಿಕೆಟ್ ಕೈತಪ್ಪಿದೆ.
PublicNext
24/05/2022 11:02 am