ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪರಿಷತ್ ಚುನಾವಣೆ : ಬಿಜೆಪಿಯಿಂದ ಅಚ್ಚರಿ ಅಭ್ಯರ್ಥಿ ಆಯ್ಕೆ

ಬೆಂಗಳೂರು : ವಿಧಾನ ಪರಿಷತ್ ಚುನಾವಣೆ ಗುದ್ದಾಟ ಕೊನೆಗೂ ಕ್ಲೈಮ್ಯಾಕ್ಸ್ ಹಂತ ತಲುಪಿದೆ. ಸದ್ಯ ನಾಮಪತ್ರ ಸಲ್ಲಿಕೆ ಕೊನೆ ದಿನವಾದ ಇಂದು ಬಿಜೆಪಿ ಅಚ್ಚರಿಕೆಯ ಅಭ್ಯರ್ಥಿಗಳನ್ನು ಅಖಾಡಕ್ಕೆ ಇಳಿಸಲು ಮುಂದಾಗಿದೆ.

ಹೌದು ಬಿಜೆಪಿ ಹೈಕಮಾಂಡ್ ಅಧಿಕೃತವಾಗಿ ಲಿಂಗಾಯತರ ಕೋಟದಡಿ ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ, ಹಿಂದುಳಿದ ವರ್ಗ ಕೋಟದಲ್ಲಿ ಪಕ್ಷದ ಕಚೇರಿ ಕಾರ್ಯದರ್ಶಿಯಾಗಿದ್ದ ಕೇಶವ ಪ್ರಸಾದ್, ದಲಿತರ ಕೋಟದಲ್ಲಿ ಎಸ್ಸಿ ಘಟಕದ ರಾಜ್ಯಾಧ್ಯಕ್ಷ ಛಲವಾದಿ ನಾರಾಯಣಸ್ವಾಮಿ ಹಾಗೂ ಮಹಿಳಾ ಕೋಟಾದಡಿಯಲ್ಲಿ ಕೊಪ್ಪಳ ಮೂಲದ ಲಂಬಾಣಿ ಸಮುದಾಯದ ಹೇಮಲತಾ ನಾಯಕ್ ಗೆ ಮಣೆ ಹಾಕಿದೆ. ಈ ಮೂಲಕ ಪರಿಷತ್ ಚುನಾವಣೆಯ ಹಗ್ಗಾಜಗ್ಗಾಟಕ್ಕೆ ಬ್ರೇಕ್ ಹಾಕಿದೆ.

ಸದ್ಯ ಬೇರೆ-ಬೆರೆ ವರ್ಗಗಳ ಆಧಾರದ ಮೇಲೆ ಅಚ್ಚರಿ ಅಭ್ಯರ್ಥಿಗಳನ್ನ ಆಯ್ಕೆ ಮಾಡಿದೆ. ಪ್ರಮುಖವಾಗಿ ಟಿಕೆಟ್ ಆಕಾಂಕ್ಷಿಗಳಲ್ಲಿ ವಿಜಯೇಂದ್ರ ಹೆಸರು ಮುಂಚೂಣಿಯಲ್ಲಿತ್ತು. ಆದ್ರೆ, ಹೈಕಮಾಂಡ್ ಕೊನೆ ಕ್ಷಣದಲ್ಲಿ ವಿಜಯೇಂದ್ರ ಹೆಸರು ಕೈಬಿಟ್ಟು ಲಿಂಗಾಯತ ಕೋಟಾದಡಿ ಲಿಂಗರಾಜ ಪಾಟೀಲ್ ಅವರಿಗೆ ಟಿಕೆಟ್ ನೀಡಿದೆ. ಇದರಿಂದ ಟಿಕೆಟ್ ನಿರೀಕ್ಷೆಯಲ್ಲಿ ವಿಜಯೇಂದ್ರ ಹಾಗೂ ಅವರ ಅಭಿಮಾನಿಗಳಿಗೆ ಹೈಕಮಾಂಡ್ ಬಿಗ್ ಶಾಕ್ ಕೊಟ್ಟಿದೆ.

Edited By : Nirmala Aralikatti
PublicNext

PublicNext

24/05/2022 11:51 am

Cinque Terre

51.66 K

Cinque Terre

5