ಡೆಹ್ರಾಡೂನ್: ಇತ್ತೀಚೆಗೆ ನಡೆದ ಉತ್ತರಾಖಂಡ ವಿಧಾನಸಭೆ ಚುನಾವಣೆಗೆ ಆಮ್ ಆದ್ಮಿ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯಾಗಿದ್ದ, ನಿವೃತ್ತ ಕರ್ನಲ್ ಅಜಯ್ ಕೊಥಿಯಾಲ್ ಅವರು ಮಂಗಳವಾರ ಡೆಹ್ರಾಡೂನ್‌ನಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರ ಸಮ್ಮುಖದಲ್ಲಿ ಅಜಯ್ ಕೊಥಿಯಾಲ್ ಅವರು ಪಕ್ಷಕ್ಕೆ ಸೇರ್ಪಡೆಗೊಂಡರು. ಕೊಥಿಯಾಲ್ ಮೇ 18 ರಂದು ಎಎಪಿಗೆ ರಾಜೀನಾಮೆ ನೀಡಿದ್ದರು. ಅವರು ಗಂಗೋತ್ರಿ ವಿಧಾನಸಭಾ ಕ್ಷೇತ್ರದಿಂದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು.
PublicNext
24/05/2022 06:20 pm