ಮೈಸೂರು: ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧಿಸಲು ಮಾಜಿ ಸಿಎಂ ಯಡಿಯೂರಪ್ಪ ಪುತ್ರ ಬಿ.ವೈ ವಿಜಯೇಂದ್ರಗೆ ಬಿಜೆಪಿ ಟಿಕೆಟ್ ನೀಡಲು ನಿರಾಕರಿಸಿದೆ. ಬಿಜೆಪಿಯ ಈ ನಡೆ ಮುಂದೆ ತಿರುಗುಬಾಣ ಆಗಲಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯಾವುದೇ ತತ್ವದ ಕಥೆ ಹೇಳಿ ಬಿ.ವೈ ವಿಜಯೇಂದ್ರಗೆ ಟಿಕೆಟ್ ಕೊಟ್ಟಿಲ್ಲ. ಇದರಿಂದ ಬೇರೆ ಪಕ್ಷಕ್ಕೆ ಲಾಭ ನಷ್ಟದ ಪ್ರಶ್ನೆ ಇಲ್ಲ. ಆದರೆ ಇದು ಸರ್ಕಾರದ ಮೇಲೆ ಗಂಭೀರ ಪರಿಣಾಮ ಬೀರಬಹುದು. ಗುಂಪುಗಾರಿಕೆಗೆ ಇನ್ನು ಕಾರಣವಾಗಬಹುದು. ಇದು ಬಿಜೆಪಿಗೆ ತಿರುಗುಬಾಣವಾಗಲಿದೆ ಎಂದಿದ್ದಾರೆ.
ಜೆಡಿಎಸ್ ಹಿತ ಶತ್ರುಗಳಿಂದ ತಮಗೆ ಲಾಭ ಆಗುತ್ತೆ ಎಂದು ಕಾಂಗ್ರೆಸ್ ಅಂದುಕೊಂಡಿದೆ. ಅದ್ಯಾವುದೂ ಈಗ ನಡೆಯುವುದಿಲ್ಲ. ಪಕ್ಷದಲ್ಲಿರುವ ಹಿತಶತ್ರುಗಳು ಈಗ ನೇರ ಶತ್ರುಗಳಾಗಿದ್ದಾರೆ. ಮಂಡ್ಯಕ್ಕೆ ಕುಮಾರಸ್ವಾಮಿ ಕೊಡುಗೆ ಏನು ಅಂತಾ ಹೇಳಿದ್ದಾರೆ. ಮೊದಲು ಸಿದ್ದರಾಮಯ್ಯ ತಮ್ಮ ಕೊಡುಗೆ ಏನೆಂದು ಹೇಳಲಿ, ರಾಜ್ಯದಲ್ಲಿ ರೈತರ ಸರಣಿ ಆತ್ಮಹತ್ಯೆ ಅದು ಕಾಂಗ್ರೆಸ್ ಕೊಡುಗೆ. ನಮ್ಮ ಕೊಡುಗೆ ಏನು ಎಂಬುದು ಮಂಡ್ಯದ ಜನರಿಗೆ ಗೊತ್ತಿದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.
PublicNext
25/05/2022 03:07 pm