ಲಖನೌ: ಕಾಂಗ್ರೆಸ್‌ನಲ್ಲಿದ್ದುಕೊಂಡೇ ಕಾಂಗ್ರೆಸ್ ವಿರುದ್ಧ ಬಂಡಾಯ ಎದ್ದು ಅಲ್ಲಿಂದ ಹೊರಬಂದಿರುವ ಕಪಿಲ್ ಸಿಬಲ್ ಈಗ ಸಮಾಜವಾದಿ ಪಕ್ಷಕ್ಕೆ ಬಂದು ರಾಜ್ಯ ಸಭೆಗೆ ಆಯ್ಕೆ ಬಯಸಿ ನಾಮಪತ್ರ ಸಲ್ಲಿಸಿದ್ದಾರೆ.
ಮೇ 16ರಂದು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದೆ. ಇದೀಗ ರಾಜ್ಯಸಭೆ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದೇನೆ ಎಂದು ಕಪಿಲ್ ಸಿಬಲ್ ಹೇಳಿದ್ದಾರೆ. ನಾನು ಯಾವಾಗಲೂ ದೇಶದಲ್ಲಿ ಸ್ವತಂತ್ರ ಧ್ವನಿಯಾಗಲು ಬಯಸುತ್ತಿದ್ದೆ. ಪ್ರತಿಪಕ್ಷದಲ್ಲಿ ಇರುವಾಗ ನಾವು ಮೋದಿ ಸರ್ಕಾರವನ್ನು ವಿರೋಧಿಸಲು ಇತರ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳಬೇಕಿತ್ತು ಎಂದು ಸಿಬಲ್ ಹೇಳಿದ್ದಾರೆ.
PublicNext
25/05/2022 11:15 pm