ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಆರ್‌ಎಸ್‌ಎಸ್ ದೃಷ್ಟಿಯಲ್ಲಿ ಹಿಂದೂ ಆಗಲು ಬ್ಲೂ ಫಿಲ್ಮ್ ನೋಡಬೇಕಾ?: ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು: ಆರ್‌ಎಸ್‌ಎಸ್ ದೃಷ್ಟಿಯಲ್ಲಿ ಹಿಂದೂ ಆಗಲೂ ಬ್ಲೂ ಫಿಲ್ಮ್ ನೋಡಬೇಕಾ?, ಗಣಿ ಲೂಟಿ ಮಾಡಬೇಕಾ? 40% ಕಮಿಷನ್ ಹೊಡೆಯಬೇಕಾ? ಚೆಕ್‌ನಲ್ಲಿ ದುಡ್ಡು ಪಡೆದು ಜೈಲಿಗೆ ಹೋಗಬೇಕಾ? ರೇಪ್‌ ಮಾಡಬೇಕಾ? ಏನು ಮಾಡಬೇಕು? ಹೇಳಿಬಿಡಿ ಎಂದು ಪ್ರಶ್ನಿಸಿರುವ ಮಾಜಿ ಸಿಎಂ ಸಿದ್ಧರಾಮಯ್ಯ ಬಿಜೆಪಿ ನಾಯಕರ ಮೇಲೆ ವಾಗ್ದಾಳಿ ನಡೆಸಿದ್ದಾರೆ.

ಕಳೆದ ಎರಡು ದಿನಗಳಿಂದ ಆರ್‌ಎಸ್‌ಎಸ್ ಮೂಲದ ಬಗ್ಗೆ ಕೆದಕಿ ಬಿಜೆಪಿ ನಾಯಕರ ಮೇಲೆ ಹರಿಹಾಯ್ದಿದ್ದ ಸಿದ್ದರಾಮಯ್ಯ, ಈಗ ಆರ್‌ಎಸ್‌ಎಸ್ ಪ್ರಕಾರ ಹಿಂದೂ ಆಗಲು ಇರಬೇಕಾದ ಮಾನದಂಡಗಳೇನು? ಎಂದು ಹತ್ತಾರು ಪ್ರಶ್ನೆಗಳನ್ನು ಮುಂದಿಟ್ಟಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ನಾನು ಪ್ರಶ್ನೆ ಮಾಡಿದ್ದು ಆರ್.ಎಸ್.ಎಸ್ ಎಂಬ ಸಂಸ್ಥೆಯನ್ನು, ಉತ್ತರಿಸುತ್ತಿರುವವರು ಬಿಜೆಪಿ ನಾಯಕರು. ಇವರು ಯಾಕೆ ಎದೆ ಬಡಿದುಕೊಳ್ಳುತ್ತಿದ್ದಾರೆ? ಆರ್.ಎಸ್.ಎಸ್ ನಾಯಕರು ಓದು-ಬರಹ ಗೊತ್ತಿಲ್ಲದವರೇ? ಅವರೇ ಉತ್ತರಿಸಲಿ ಎಂಬುದಾಗಿ ಹೇಳಿದ್ದಾರೆ.

ಆರ್.ಎಸ್.ಎಸ್ ದೃಷ್ಟಿಯಲ್ಲಿ ಹಿಂದೂ ಆಗಲೂ 40% ಕಮಿಷನ್ ಹೊಡೆಯಬೇಕಾ? ಬ್ಲೂ ಫಿಲ್ಮ್ ನೋಡಬೇಕಾ? ಗಣಿ ಲೂಟಿ ಮಾಡಬೇಕಾ? ಚೆಕ್ ನಲ್ಲಿ ದುಡ್ಡು ಪಡೆದು ಜೈಲಿಗೆ ಹೋಗಬೇಕಾ? ರೇಪ್ ಮಾಡಬೇಕಾ? ಏನು ಮಾಡಬೇಕು? ಹೇಳಿಬಿಡಿ ಎಂದು ಕೇಳಿದ್ದಾರೆ. ಹಸಿದ ಹೊಟ್ಟೆಗೆ ಅನ್ನ, ಎಳೆಯ ಮಕ್ಕಳಿಗೆ ಹಾಲು, ರೈತರ ಬೆಳೆಗೆ ನ್ಯಾಯದ ಬೆಲೆ, ಯುವಜನರಿಗೆ ಉದ್ಯೋಗ, ಅವಕಾಶ ವಂಚಿತರಿಗೆ ಸಮಾನ ಅವಕಾಶ, ಜಾತಿ ತಾರತಮ್ಯದಿಂದ ಅನ್ಯಾಯಕ್ಕೀಡಾದವರಿಗೆ ಸಾಮಾಜಿಕ ನ್ಯಾಯ.. ಹಿಂದೂ ಆಗಲು ಇಷ್ಟು ಅರ್ಹತೆ ಸಾಲದೇ? ಎಂದು ಕಿಡಿಕಾರಿದ್ದಾರೆ.

ಹಿಂದೂಗಳೆಲ್ಲ ಒಂದು ಎಂದು ಕಂಠಶೋಷಣೆ ಮಾಡುತ್ತಿರುವ ಆರ್.ಎಸ್.ಎಸ್ ತನ್ನ ಸಂಘಟನೆಯ ಪದಾಧಿಕಾರಗಳನ್ನೆಲ್ಲಾ ಯಾಕೆ ಒಂದು ಜಾತಿಗೆ ಮೀಸಲಿಟ್ಟಿದೆ? ಆರ್.ಎಸ್.ಎಸ್ ನ ಪದಾಧಿಕಾರಿಗಳಲ್ಲಿ ಎಷ್ಟು ಮಂದಿ ದಲಿತರು, ಹಿಂದುಳಿದ ಜಾತಿಯವರಿದ್ದಾರೆ? ಎಂದಿದ್ದಾರೆ. ಆರ್.ಎಸ್.ಎಸ್ ದೃಷ್ಟಿಯಲ್ಲಿ ಹಿಂದೂ ಧರ್ಮದ ವ್ಯಾಖ್ಯಾನ ಏನು? ಹಿಂದೂ ಆಗಲು ಹಿಂದೂ ತಂದೆ-ತಾಯಿ ಹೊಟ್ಟೆಯಲ್ಲಿ ಹುಟ್ಟಿದರೆ ಸಾಕಾ? ಇಲ್ಲವೇ ಬಿಜೆಪಿ ಎಂಬ ರಾಜಕೀಯ ಪಕ್ಷದ ಸದಸ್ಯರಾಗಬೇಕಾ? ಎಂದು ವಾಗ್ದಾಳಿ ನಡೆಸಿದ್ದಾರೆ.

ಹಿಂದೂ ಧರ್ಮದ ರಕ್ಷಣೆಗಾಗಿಯೇ ಅವತಾರ ಎತ್ತಿ ಬಂದಂತೆ ಮಾತನಾಡುತ್ತಿರುವ ಆರ್.ಎಸ್.ಎಸ್ ನಾಯಕರು ಬೆಂಬಲಿಸುತ್ತಿರುವುದು ಮಾತ್ರ ಬಿಜೆಪಿ ಎಂಬ ರಾಜಕೀಯ ಪಕ್ಷವನ್ನು. ಯಾಕೆ ಬಿಜೆಪಿಯಲ್ಲಿರುವವರು ಮಾತ್ರ ಹಿಂದೂಗಳೇ? ಎಂದು ಹೇಳಿದ್ದಾರೆ. ಆರ್.ಎಸ್.ಎಸ್ ಪ್ರತಿಪಾದಿಸುವ ಹಿಂದೂ ಧರ್ಮದಲ್ಲಿ ದಲಿತರು, ಹಿಂದುಳಿದ ಜಾತಿಗಳ ಸ್ಥಾನಮಾನ ಏನು? ಆರ್.ಎಸ್.ಎಸ್ ಯಾಕೆ ಮೀಸಲಾತಿ, ಭೂಸುಧಾರಣೆಯನ್ನು ವಿರೋಧಿಸುತ್ತಾ ಬಂದಿದೆ? ಇದರ ಫಲಾನುಭವಿಗಳು ಹಿಂದುಗಳಲ್ಲವೇ? ಎಂದಿದ್ದಾರೆ.

ಹಿಂದೂಗಳೆಲ್ಲ ಒಂದು ಎಂದು ಕಂಠಶೋಷಣೆ ಮಾಡುತ್ತಿರುವ ಆರ್.ಎಸ್.ಎಸ್ ಯಾಕೆ ಹಿಂದೂ ಧರ್ಮದ ಅನಿಷ್ಠಗಳಾದ ಅಸ್ಪೃಶ್ಯತೆ, ಅಸಮಾನತೆ, ಮೂಢ ನಂಬಿಕೆ, ಕಂದಾಚಾರಗಳ ಬಗ್ಗೆ ಮಾತನಾಡುತ್ತಿಲ್ಲ? ಎಂದು ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಹಿಂದೂ ಧರ್ಮದೊಳಗಿನ ಅನಿಷ‍್ಠಗಳನ್ನು ಪ್ರಶ್ನಿಸಿದ ಮಾತ್ರಕ್ಕೆ ನನ್ನಂತಹವರು ಹಿಂದೂ ವಿರೋಧಿ ಆಗುವುದಾದರೆ? ಇದೇ ಕೆಲಸ ಮಾಡಿರುವ ಸ್ವಾಮಿ ವಿವೇಕಾನಂದ, ಕನಕದಾಸ, ನಾರಾಯಣ ಗುರುಗಳನ್ನು ಏನೆಂದು ಕರೆಯುತ್ತೀರಿ? ಎಂದು ಕೇಳಿದ್ದಾರೆ.

ಆರ್.ಎಸ್.ಎಸ್ ನಾಯಕರೇ ನಿಮ್ಮ ಆತ್ಮವನ್ನು ಸಾಕ್ಷಿಯಾಗಿಟ್ಟುಕೊಂಡು ಹೇಳಿಬಿಡಿ. ನಿಮ್ಮ ನಿಷ್ಠೆ ರಾಷ್ಟ್ರಧ್ವಜಕ್ಕೋ? ಭಗವಾ ಧ್ವಜಕ್ಕೋ? ನಿಮ್ಮ ನಿಷ್ಠೆ ಸಂವಿಧಾನಕ್ಕೋ ? ಮನುಸ್ಮೃತಿಗೋ? ನಿಮ್ಮ ನಿಷ್ಠೆ ಗಾಂಧೀಜಿಗೋ? ಗೋಡ್ಸೆಗೋ? ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ. ಆರ್.ಎಸ್.ಎಸ್ ನಾಯಕರೇ, ಈ ರಿಮೋಟ್ ಕಂಟ್ರೋಲ್ ರಾಜಕೀಯ ಬಿಟ್ಟು ಬಿಡಿ. ನಿಮ್ಮ ತತ್ವ-ಸಿದ್ದಾಂತದ ಬಗ್ಗೆ ಅಷ್ಟೊಂದು ವಿಶ್ವಾಸ ನಿಮಗಿದ್ದರೆ ಈ ಹಿಂಬಾಗಿಲ ರಾಜಕೀಯ ಮಾಡದೆ ನೇರವಾಗಿ ಚುನಾವಣೆಯಲ್ಲಿ ಸ್ಪರ್ಧಿಸಿ ಬಿಡಿ, ಗೆಲುವು ಕೋಮುವಾದದ್ದೋ? ಜಾತ್ಯತೀತತೆಯದ್ದೋ? ನೋಡಿಯೇ ಬಿಡೋಣ ಎಂದು ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.

Edited By : Nagaraj Tulugeri
PublicNext

PublicNext

28/05/2022 09:16 pm

Cinque Terre

141.72 K

Cinque Terre

82

ಸಂಬಂಧಿತ ಸುದ್ದಿ