ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾಂಗ್ರೆಸ್ ಗೆ ಗುಡ್ ಬೈ ಹೇಳಿದ ಮುಖ್ಯಮಂತ್ರಿ ಚಂದ್ರು : ಟಿಕೆಟ್ ಕೈ ತಪ್ಪಿದ ಬೇಸರ

ಬೆಂಗಳೂರು: ಮುಖ್ಯಮಂತ್ರಿ ಚಂದ್ರು ಕಾಂಗ್ರೆಸ್ ಗೆ ಗುಡ್ ಬೈ ಹೇಳಿದ್ದಾರೆ, ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಹೌದು ಹಿರಿಯ ನಟ ಮುಖ್ಯಮಂತ್ರಿ ಚಂದ್ರು ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ.

ರಾಜ್ಯಸಭೆ ಟಿಕೆಟ್ ನಿರೀಕ್ಷೆಯಲ್ಲಿದ್ದ ಚಂದ್ರು ಪಕ್ಷಕ್ಕೆ ಪ್ರಾಮಾಣಿಕ ಸೇವೆ ಸಲ್ಲಿಸಿದ್ರೂ ಗುರುತಿಸಿದ ಹಿನ್ನೆಲೆ ಬೇಸರವಾಗಿದ್ದರು. ಮುಖ್ಯಮಂತ್ರಿ ಚಂದ್ರು ರಾಜೀನಾಮೆ ನೀಡುವ ಮೂಲಕ ಪರೋಕ್ಷ ಅಸಮಾಧಾನ ಹೊರಹಾಕಿದ್ಧಾರೆ. ಕೈ ನಾಯಕರ ವಿರುದ್ಧ ಮುಖ್ಯಮಂತ್ರಿ ಚಂದ್ರು ಬೇಸರ ವ್ಯಕ್ತಪಡಿಸಿದ್ದಾರೆ.

ಸದ್ಯ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದು, ಪಕ್ಷದ ಸಾಂಸ್ಕೃತಿಕ ಘಟಕದ ಅಧ್ಯಕ್ಷರನ್ನಾಗಿ ಪ್ರಕಟಿಸಿರುವ ಜವಾಬ್ದಾರಿಯನ್ನು ವಹಿಸಿಕೊಳ್ಳುವ ಪ್ರಮೇಯವೇ ಉದ್ಭವಿಸುವುದಿಲ್ಲ ಎಂದು ಪತ್ರದಲ್ಲಿ ಉಲ್ಲೇಖ ಮಾಡಿದ್ದಾರೆ.

Edited By : Nirmala Aralikatti
PublicNext

PublicNext

29/05/2022 02:56 pm

Cinque Terre

47.4 K

Cinque Terre

5

ಸಂಬಂಧಿತ ಸುದ್ದಿ