ನವದೆಹಲಿ: ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಬಿಗ್ ಶಾಕ್ ಆಗಿದ್ದು, ಹಿರಿಯ ನಾಯಕ ಮತ್ತು ಸುಪ್ರೀಂ ಕೋರ್ಟ್ ವಕೀಲ ಬ್ರಿಜೇಶ್ ಕಾಳಪ್ಪ ಅವರು ಬುಧವಾರ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.
ಫೇಸ್ಬುಕ್ ಪೋಸ್ಟ್ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿರುವುದಾಗಿ ತಿಳಿಸಿದ ಅವರು, ಪಕ್ಷವನ್ನು ತೊರೆದಿದ್ದಕ್ಕಾಗಿ ಕಾಂಗ್ರೆಸ್ ಪಕ್ಷಕ್ಕೆ ನನ್ನ ಹೃದಯಾಂತರಾಳದಿಂದ ಧನ್ಯವಾದ ಹೇಳಲು ಬಯಸುತ್ತೇನೆ, ಪಕ್ಷವು ನನಗೆ ಅನೇಕ ಅವಕಾಶಗಳನ್ನು ನೀಡಿದೆ. ನಾನು ದೇಶದ ಪ್ರತಿಯೊಂದು ಭಾಗದಲ್ಲೂ ಪರಿಚಿತ ಮುಖ, ನನ್ನನ್ನು ಗುರುತಿಸಿದ್ದಕ್ಕಾಗಿ ನಿಮಗೆ ಧನ್ಯವಾದಗಳು. ಕರ್ನಾಟಕ ಸರ್ಕಾರದಲ್ಲಿ, ನನ್ನನ್ನು ಕಾನೂನು ಸಲಹೆಗಾರನನ್ನಾಗಿ ನೇಮಿಸಲಾಯಿತು, ಅದು ಸಚಿವ ಸ್ಥಾನಕ್ಕೆ ಸಮನಾಗಿರುತ್ತದೆ ಎಂದು ಬರೆದುಕೊಂಡಿದ್ದಾರೆ.
PublicNext
01/06/2022 08:17 am