ಉತ್ತರ ಕನ್ನಡ: ಪಶ್ಚಿಮ ಶಿಕ್ಷಕರ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಬಸವರಾಜ ಗುರಿಕಾರ ಅವರು ಉತ್ತರ ಕನ್ನಡ ಜಿಲ್ಲೆಯಲ್ಲಿ ಮಿಂಚಿನ ಪ್ರಚಾರ ನಡೆಸಿದ್ದಾರೆ. ಸತತ ಏಳು ಬಾರಿ ಗೆದ್ದು ಬೀಗಿರುವ ಬಸವರಾಜ ಹೊರಟ್ಟಿ ಅವರಿಗೆ ಗುರಿಕಾರ ಅವರು ಸಮೀಪದ ಪ್ರತಿಸ್ಪರ್ಧಿಯಾಗಿದ್ದು, ಪ್ರಸಕ್ತ ವರ್ಷದ ಚುನಾವಣೆಯಲ್ಲಿ ಗುರಿಕಾರ ಅವರು ಗೆಲುವು ಸಾಧಿಸುವ ಹುಮ್ಮಸ್ಸು ಹೊಂದಿದ್ದಾರೆ.
ಧಾರವಾಡ, ಹಾವೇರಿ, ಉತ್ತರ ಕನ್ನಡ ಹಾಗೂ ಗದಗ ಜಿಲ್ಲೆಗಳನ್ನೊಳಗೊಂಡು ಈ ಚುನಾವಣೆ ನಡೆಯುತ್ತಿದೆ. ನಾಲ್ಕೂ ಜಿಲ್ಲೆಗಳಲ್ಲಿ ಗುರಿಕಾರ ಅವರು, ನಿರಂತರವಾಗಿ ಪ್ರಚಾರ ನಡೆಸಿದ್ದಾರೆ.
ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾಗಿ, ಅಖಿಲ ಭಾರತ ಶಿಕ್ಷಕರ ಫೆಡರೇಶನ್ ಉಪಾಧ್ಯಕ್ಷರಾಗಿ ಕೆಲಸ ಮಾಡಿರುವ ಗುರಿಕಾರ ಅವರು ವಿಧಾನ ಪರಿಷತ್ ಚುನಾವಣೆಯಲ್ಲಿ ಗೆಲುವು ಸಾಧಿಸಿ ಶಿಕ್ಷಕರಿಗಾಗಿ ಮತ್ತಷ್ಟು ಒಳ್ಳೆಯ ಕೆಲಸ ಮಾಡುವ ಉದ್ದೇಶ ಹೊಂದಿದ್ದಾರೆ.
ಬುಧವಾರ ಗುರಿಕಾರ ಅವರು, ದಾಂಡೇಲಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಅಂಕೋಲಾದ ಪಿ.ಎಂ.ಹೈಸ್ಕೂಲ್, ಸರ್ಕಾರಿ ಹಿರಿಯ ಪ್ರೌಢ ಶಾಲೆ, ಗೋಖಲೆ ಸೆಂಟಿನರಿ ಪದವಿಪೂರ್ವ ಕಾಲೇಜು, ಪೂರ್ಣ ಪ್ರಜ್ಞಾ ಪ್ರೌಢ ಶಾಲೆ, ಕೆಎಲ್‌ಐ ಕಾಲೇಜು ಹಾಗೂ ಹೈಸ್ಕೂಲು, ನಿರ್ಮಲ ಹೃದಯ ಆಂಗ್ಲ ಮಾಧ್ಯಮ ಹೈಸ್ಕೂಲ್, ಆದರ್ಶ ಪ್ರೌಢ ಶಾಲೆ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಹಿಮಾಲಯ ಕಾಲೇಜು ಸೇರಿದಂತೆ ಅನೇಕ ಕಡೆಗಳಲ್ಲಿ ಮಿಂಚಿನ ಪ್ರಚಾರ ನಡೆಸಿದರು.
ಶಿಕ್ಷಕರನ್ನು ಭೇಟಿ ಮಾಡಿ ಈ ವರ್ಷ ಚುನಾವಣೆಯಲ್ಲಿ ತಮಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡಿ ಗೆಲ್ಲಿಸುವಂತೆ ಮನವಿ ಮಾಡಿದರು. ಶಿಕ್ಷಕರಿಂದಲೂ ಗುರಿಕಾರ ಅವರಿಗೆ ಉತ್ತಮ ಸ್ಪಂದನೆ ದೊರೆಯಿತು.
PublicNext
01/06/2022 04:25 pm