ಯಾದಗಿರಿ: ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಮೇಲೆ ಹಲ್ಲೆ ಎಸಗುತ್ತಿರುವ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರನ್ನ ಕೂಡಲೇ ಬಂಧಿಸಬೇಕು ಎಂದು ನಗರದಲ್ಲಿ ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ ನೇತೃತ್ವದಲ್ಲಿ ಸುರಪುರ ಬಂದ್ ಮಾಡಿ ಬೃಹತ್ ಪ್ರತಿಭಟನೆ ಮಾಡಲಾಯಿತು.
ನಗರದ ವೇಣುಗೋಪಾಲಸ್ವಾಮಿ ದೇವಸ್ಥಾನದಿಂದ ಮಹಾತ್ಮಗಾಂಧಿ ವೃತ್ತದವರೆಗೆ ಸಾವಿರಾರು ಸಂಖ್ಯೆಯ ಕಾರ್ಯಕರ್ತರೊಂದಿಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಿತು. ಇದೇ ವೇಳೆ ಮಾತನಾಡಿದ ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರು, 'ತಾಲೂಕಿನ ವಿವಿಧ ಗ್ರಾಮಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಸುಳ್ಳು ಕೇಸ್ ಹಾಕಿದ್ದು, ಇಷ್ಟು ಅನ್ಯಾಯ ಮಾಡೋದು ಸರಿಯಲ್ಲ. ಮೇಲಿರುವ ದೇವರು ಎಲ್ಲವನ್ನು ಗಮನಿಸ್ತಾನೆ ಇಂಥ ಪ್ರಕರಣಗಳು ರದ್ದುಪಡಿಸಬೇಕು' ಎಂದು ಗುಡುಗಿದರು.
ಇನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಬರೆದ ಮನವಿ ಪತ್ರವನ್ನು ತಹಸೀಲ್ದಾರ್ ಸುಬ್ಬಣ್ಣ ಜಮಖಂಡಿ ಮೂಲಕ ಸಲ್ಲಿಸಿದ್ದು, ಪ್ರತಿಭಟನೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಿಂಗಣ್ಣ ಬಾಚಿಮಟ್ಟಿ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ರಾಜಶೇಖರಗೌಡ ಪಾಟೀಲ ವಜ್ಜಲ್, ಭೀಮರಾಯ ಮೂಲಿಮನಿ ಸೇರಿದಂತೆ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಇದ್ದರು.
-ಮೌನೇಶ ಬಿ. ಮಂಗಿಹಾಳ, ಪಬ್ಲಿಕ್ ನೆಕ್ಸ್ಟ್ ಯಾದಗಿರಿ
PublicNext
02/06/2022 08:27 pm